BWF ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಪಡೆದ ಚಿರಾಗ್ ಶೆಟ್ಟಿ – ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ
ಈ ಸಾಧನೆ ಮಾಡಿದ ಮೊದಲ ಭಾರತೀಯ ಜೋಡಿ
Team Udayavani, Oct 10, 2023, 1:58 PM IST
ಹೊಸದಿಲ್ಲಿ: ಭಾರತದ ಯುವ ಬ್ಯಾಡ್ಮಿಂಟನ್ ಜೋಡಿ ಚಿರಾಗ್ ಶೆಟ್ಟಿ – ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಕಳೆದ ವಾರವಷ್ಟೇ ಏಷ್ಯನ್ ಗೇಮ್ಸ್ ಕೂಟದಲ್ಲಿ ಚೊಚ್ಚಲ ಸ್ವರ್ಣ ಪದಕ ಗೆದ್ದು ಇತಿಹಾಸ ಬರೆದಿದ್ದರು. ಇದೀಗ ಇದೇ ಜೋಡಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದ್ದು, ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಜೋಡಿ ಎಂಬ ದಾಖಲೆ ಬರೆದಿದ್ದಾರೆ.
2022ರಿಂದ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಇಂಡಿಯನ್ ಓಪನ್ ಸೇರಿದಂತೆ ಐದು BWF ವರ್ಲ್ಡ್ ಟೂರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಫ್ರೆಂಚ್ ಓಪನ್, ಸ್ವಿಸ್ ಓಪನ್, ಇಂಡೋನೇಷ್ಯಾ ಓಪನ್ ಮತ್ತು ಕೊರಿಯಾ ಓಪನ್ ಕೂಟಗಳಲ್ಲಿ ಜಯಿಸಿದ್ದಾರೆ. ಇಂಡೋನೇಷ್ಯಾ ಓಪನ್ ಮೂಲಕ ಬಿಡಬ್ಲ್ಯೂಎಫ್ ಸೂಪರ್ 1000 ವರ್ಲ್ಡ್ ಟೂರ್ ಟೈಟಲ್ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ:Mia Khalifa: “ಪ್ಯಾಲೆಸ್ತೀನೀಯರು ಸ್ವಾತಂತ್ರ್ಯ ಹೋರಾಟಗಾರರು..”ವಿವಾದಕ್ಕೀಡಾದ ಮಿಯಾ ಖಲೀಫಾ
ಇದಕ್ಕೆ ಪೂರಕ ಎನ್ನುವಂತೆ ಭಾರತದ ಐತಿಹಾಸಿಕ ಥೋಮಸ್ ಕಪ್ ವಿಜಯದಲ್ಲಿ ಈ ಜೋಡಿ ಪ್ರಮುಖ ಪಾತ್ರ ವಹಿಸಿತ್ತು. ಫೈನಲ್ ನಲ್ಲಿ ಇಂಡೋನೇಷ್ಯಾವನ್ನು ಸೋಲಿಸಿ ಮೊದಲ ಬಾರಿಗೆ ಭಾರತ ತಂಡ ಟ್ರೋಫಿ ಗೆದ್ದುಕೊಂಡಿತ್ತು.
On 🔝 of the 🌏!
1️⃣st 🇮🇳 pair to achieve this feat 🫡@himantabiswa | @sanjay091968 | @lakhaniarun1 #BWFWorldRankings#IndiaontheRise#BadmintonTwitter #Badminton pic.twitter.com/B8t9cmEeZc
— BAI Media (@BAI_Media) October 10, 2023
ಕಳೆದ ಕಾಮನ್ ವೆಲ್ತ್ ಗೇಮ್ಸ್ ಕೂಟದಲ್ಲಿ ಚಿರಾಗ್ ಶೆಟ್ಟಿ- ಸಾತ್ವಿಕ್ ಸಾಯಿರಾಜ್ ಜೋಡಿ ಸ್ವರ್ಣ ಪದಕ ಗೆದ್ದುಕೊಂಡಿದ್ದರು. ಅಲ್ಲದೆ ದುಬೈನಲ್ಲಿ ನಡೆದ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಕಂಚು ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.