ಸಂಗೀತ ವಿದ್ವಾನ್ ಪ್ರಶಸ್ತಿಗೆ ಡಾ|| ಪದ್ಮಾಮೂರ್ತಿ ಆಯ್ಕೆ: ಸಚಿವ ಶಿವರಾಜ ತಂಗಡಗಿ
Team Udayavani, Oct 10, 2023, 6:35 PM IST
ಮೈಸೂರು: 2023-24ನೇ ಸಾಲಿನ ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿಗೆ ಬೆಂಗಳೂರಿನ ಡಾ|| ಪದ್ಯಾಮೂರ್ತಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
91 ವರ್ಷದ ಡಾ|| ಪದ್ಮಾಮೂರ್ತಿಯವರು ಕರ್ನಾಟಕ ಶಾಸ್ತ್ರೀಯ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಡಾ|| ಪಂಡಿತ್ ನರಸಿಂಹಲು ವಡವಾಟಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಡಾ|| ಪದ್ಮಾಮೂರ್ತಿಯವರನ್ನು ಆಯ್ಕೆ ಮಾಡಿದೆ.
ಅ.15ರಂದು ಮೈಸೂರು ಅರಮನೆ ಮುಖ್ಯ ವೇದಿಕೆಯಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು “ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ” ಪ್ರದಾನ ಮಾಡಲಿದ್ದಾರೆಂದು ಅವರು ತಿಳಿಸಿದರು. ಈ ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದು, ಸರಸ್ವತಿ ವಿಗ್ರಹದ ಸ್ಮರಣಿಕೆ ಹಾಗೂ ಫಲತಾಂಬೂಲ, ಶಾಲು, ಹಾರ ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.