ಭಾರತೀಯ ಕ್ರೀಡಾಪಟುಗಳಿಂದ ಮುಂದಿನ ಏಷ್ಯಾಡ್ನಲ್ಲಿಇನ್ನೂ ಉತ್ತಮ ಸಾಧನೆ: ಪ್ರಧಾನಿ ವಿಶ್ವಾಸ
Team Udayavani, Oct 10, 2023, 11:16 PM IST
ಹೊಸದಿಲ್ಲಿ: ಭಾರತೀಯ ಕ್ರೀಡಾಪಟುಗಳು ಮುಂದಿನ ಏಷ್ಯಾಡ್ನಲ್ಲಿ ಇನ್ನೂ ಉತ್ತಮ ಸಾಧನೆ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ವ್ಯಕ್ತಪಡಿಸಿದ್ದು, ಇದಕ್ಕೆ ಬೇಕಾದ ಎಲ್ಲ ನೆರವನ್ನು ಸರಕಾರದ ಕಡೆಯಿಂದ ಕೊಡಲಾಗುತ್ತದೆ ಎಂದಿದ್ದಾರೆ.
ಏಷ್ಯಾಡ್ನಲ್ಲಿ ಪದಕ ಗೆದ್ದು ಬಂದ ಕ್ರೀಡಾಪಟುಗಳ ಜತೆ ಸಂವಾದ ನಡೆಸಿದ ಅವರು, ಮುಂದಿನ ದಿನಗಳಲ್ಲಿ ಕ್ರೀಡಾಪಟುಗಳಿಗೆ ಎದುರಾಗಿರುವ ಎಲ್ಲ ತೊಂದರೆಗಳನ್ನು ನಿವಾರಿಸುತ್ತೇವೆ ಎಂದು ಭರವಸೆ ನೀಡಿದರು. ಈ ಬಾರಿ 100 ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದೀರಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪದಕ ಗೆದ್ದು ಬನ್ನಿ ಎಂದರು. ಏಷ್ಯಾಡ್ನಂತೆಯೇ ಮುಂದಿನ ವರ್ಷ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲೂ ಉತ್ತಮ ಸಾಧನೆ ಮಾಡಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಕ್ರೀಡಾಪಟುಗಳನ್ನು ಅವರು ವಿಶೇಷವಾಗಿ ಅಭಿನಂದಿಸಿದರು. “ಅರ್ಧದಷ್ಟು ಪದಕಗಳನ್ನು ಮಹಿಳೆಯರೇ ಗೆದ್ದಿದ್ದಾರೆ. ಅವರ ಸಾಧನೆ ಮಹತ್ವದ್ದಾಗಿದೆ ಎಂದರು. ನಮ್ಮ ಕ್ರೀಡಾಪಟುಗಳು ಸಾಮರ್ಥ್ಯಕ್ಕೂ ಮಿಗಿಲಾದ ಪ್ರದರ್ಶನ ನೀಡಿದ್ದಾರೆ. ಭಾರತ ಎಂದಿಗೂ ಪ್ರತಿಭೆಗಳ ಕೊರತೆ ಅನುಭವಿಸಿಲ್ಲ. ಇವರಿಗೆ ಗೆಲುವು ಕೂಡ ಜತೆಗಿರುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.