HDK ವಿರುದ್ಧ ತಿರುಗಿಬಿದ್ದ ಕೈ ನಾಯಕರು
Team Udayavani, Oct 11, 2023, 12:46 AM IST
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜೈಲಿಗೆ ಹಾಕುವ ಷರತ್ತಿನ ಮೇಲೆಯೇ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಂತಿದೆ ಎಂದು ಕಾಂಗ್ರೆಸ್ ನಾಯಕರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶೀಘ್ರ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ಮಂಗಳವಾರ ಮುಗಿಬಿದ್ದ ಕಾಂಗ್ರೆಸ್ ನಾಯಕರು, ಬಹುಶಃ ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಇದೇ ಮಾತುಕತೆ ಆಗಿರಬೇಕು. ಇಂತಹದ್ದೊಂದು ಕಂಡಿಷನ್ ಹಾಕಿಕೊಂಡು ಮೈತ್ರಿ ಮಾಡಿಕೊಂಡಂತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಮೈತ್ರಿಗೆ ಅದೇ ಕಂಡೀಷನ್!
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮ್ಮದ್, ಇಷ್ಟೊಂದು ನಿಖರವಾಗಿ ಹೇಳುತ್ತಿರುವುದನ್ನು ನೋಡಿದರೆ, ನನ್ನ ಪ್ರಕಾರ ಇವರು (ಕುಮಾರಸ್ವಾಮಿ) ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವ ಕಂಡಿಷನ್ ಹಾಕಿಕೊಂಡೇ ಮೈತ್ರಿ ಮಾಡಿಕೊಂಡಿರಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಮೀಟಿಂಗ್‌ನಲ್ಲಿ ಈ ಷರತ್ತು ವಿಧಿಸಿರಬೇಕು ಎಂದು ಆರೋಪಿಸಿದರು.
ಅದಕ್ಕೂ ಮುನ್ನ ಯಾವ ಕಾರಣಕ್ಕೆ ಜೈಲಿಗೆ ಹೋಗುತ್ತಾರೆ ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು ಎಂದೂ ಅವರು ಆಗ್ರಹಿಸಿದ್ದಾರೆ. ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಲಕ್ಷ್ಮಣ ಸವದಿ, ಬಹುಶಃ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರ ಬಳಿ ಇದನ್ನೇ ಮಾತಾಡಿಕೊಂಡು ಬಂದಿರಬೇಕು. ಹಾಗಾಗಿ, ಅಷ್ಟು ನಿಖರವಾಗಿ ಹೇಳುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.
ಮಾಹಿತಿ ಇರಬಹುದು
ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರಿಗೇ (ಕುಮಾರಸ್ವಾಮಿಗೆ) ಮಾಹಿತಿ ಇರಬಹುದು ಎಂದಷ್ಟೇ ಹೇಳಿದರು.
ಕಾಂಗ್ರೆಸ್ ನಾಯಕರ ಜೈಲಿಗೆ ಕಳುಹಿಸಲು ಬಿಜೆಪಿ-ಜೆಡಿಎಸ್ ಮೈತ್ರಿ
ಚಿತ್ರದುರ್ಗ: ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿರುವುದೇ ನಮ್ಮ ನಾಯಕರನ್ನು ಜೈಲಿಗೆ ಕಳಿಸುವುದಕ್ಕಾಗಿ ಎನ್ನುವುದು ಅವರ ಮಾತುಗಳಲ್ಲೇ ಗೊತ್ತಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಿದ್ದಾರೆ. ಪ್ರಪಂಚದ ಯಾವುದೇ ಸರಕಾರ ಮಾಡದ ಕ್ರಾಂತಿಕಾರಕ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿರುವುದನ್ನು ನೋಡಿ ಬಿಜೆಪಿ, ಜೆಡಿಎಸ್‌ನವರಿಗೆ ಸಹಿಸಿಕೊಳ್ಳಲಾಗದೆ ತೊಂದರೆ ಕೊಡುತ್ತಿದ್ದಾರೆ. ಇದಕ್ಕೆ ಜನರು ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ. ಮುಖ್ಯಮಂತ್ರಿಗಳು ಕಂದಾಯ ಇಲಾಖೆಯ ಕೆಲಸಗಳು ವೇಗವಾಗಿ ಆಗಬೇಕು ಎಂದು ಸಲಹೆ ನೀಡಿದ್ದಾರೆ. ಇದೇ ಆಶಯದೊಂದಿಗೆ ನಾನು ಕೂಡ ಎಲ್ಲ ಕಡೆ ಪ್ರವಾಸ ಮಾಡಿ ವರ್ಷಗಳಿಂದ ಬಾಕಿ ಉಳಿದಿರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಕೆಲಸ ಮಾಡಿಸುತ್ತಿದ್ದೇನೆ. ಹೊಸದುರ್ಗ ತಾಲೂಕು ಕಚೇರಿಯ ರೆಕಾರ್ಡ್ ರೂಂಗೆ ಭೇಟಿ ನೀಡಿದ್ದೆ. 50, 100 ವರ್ಷಗಳ ದಾಖಲೆಗಳು ಪುಡಿ ಪುಡಿಯಾಗುವ ಸ್ಥಿತಿಯಲ್ಲಿವೆ. ದಾಖಲೆಗಳ ಸ್ಥಿತಿ ಶೋಚನೀಯವಾಗಿದೆ. ಎಲ್ಲವನ್ನೂ ಸ್ಕಾÂನ್ ಮಾಡಿಸಿ ಉಳಿಸುವ ಪ್ರಯತ್ನ ಮಾಡುತ್ತೇನೆ. ಈ ವರ್ಷ ಒಂದೂವರೆ ಸಾವಿರ ಗ್ರಾಮ ಲೆಕ್ಕಿಗರು, ಒಂದು ಸಾವಿರ ಭೂ ಮಾಪಕರನ್ನು ನೇಮಕ ಮಾಡಿಕೊಂಡು ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಿದ್ದೇವೆ. 357 ಸರಕಾರಿ ಭೂಮಾಪಕರನ್ನು ನೇಮಕ ಮಾಡಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.