Kannada Cinema; ‘ಕಚೋರಿ’ ನಂಬಿ ಬಂದ ಜೋಡಿ; ತೆರೆಗೆ ಸಿದ್ದ
Team Udayavani, Oct 11, 2023, 12:53 PM IST
ಭಿನ್ನ-ವಿಭಿನ್ನ ಟೈಟಲ್‌ಗಳ ಮೂಲಕ ಗಮನ ಸೆಳೆಯಲು ಅನೇಕ ಸಿನಿಮಾಗಳು ಪ್ರಯತ್ನಿಸುತ್ತಲೇ ಇರುತ್ತವೆ. ಈ ಸಾಲಿಗೆ ಹೊಸ ಸೇರ್ಪಡೆ “ಕಚೋರಿ’. ಈ ಚಿತ್ರವನ್ನು ಸಿನಿವೇ ಸಿನಿ ಕ್ರಿಯೇಶನ್ಸ್ ಮೂಲಕ ಆರ್ಯನ್ ಅವರು ನಿರ್ಮಾಣ ಮಾಡುವುದರ ಜೊತೆಗೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ.
ಆರ್ಯನ್ ಈ ಚಿತ್ರದ ನಾಯಕನೂ ಆಗಿದ್ದು, ಇಳಾ ವಿಟ್ಲ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಹಿರಿಯ ನಟ ಕೀರ್ತಿರಾಜ್ ಡಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೃಪಾಕರ್ ಅವರ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಆರ್ಯನ್, “ನಾನು ಸಿನಿವೇ ಸಿನಿ ಆ್ಯಕ್ಟಿಂಗ್ ಕ್ಲಾಸ್ ನಡೆಸುತ್ತಿದ್ದು, ಆರಂಭದಲ್ಲಿ ಒಂದು ಮಕ್ಕಳ ಚಿತ್ರ ಮಾಡಬೇಕೆಂದುಕೊಂಡಿದ್ದೆ. ನಂತರ ಕೋವಿಡ್ ಸಮಯದಲ್ಲಿ ಚಿತ್ರವನ್ನು ಆರಂಭಿಸಿದೆವು. ಸ್ನೇಹಿತರಾದ ರಮೇಶ್, ಮಂಜುನಾಥ್, ಖಾಜಾಹುಲಿ ಇವರೆಲ್ಲ ನನಗೆ ತುಂಬಾ ಸಪೋರ್ಟ್ ಮಾಡಿದರು. ಚಿತ್ರದಲ್ಲಿ ನಾಯಕ ಕಚೋರಿ ಮಾರುವ ಹುಡುಗ. ಶ್ರೀಮಂತ ಹುಡುಗಿಯನ್ನು ಲವ್ ಮಾಡುತ್ತಾನೆ. ನಂತರ ಬ್ರೇಕಪ್ ಆಗುತ್ತೆ, ಏಕೆ ಬ್ರೇಕಪ್ ಆಯ್ತು, ಅದಕ್ಕೆ ಕಾರಣ ಏನು? ಎಂದು ಹುಡುಕುವುದೇ ಚಿತ್ರದ ಎಳೆ. ಗಂಗಾವತಿ ಸುತ್ತಮುತ್ತ ಟಾಕೀ ಪೋರ್ಷನ್ ಮುಗಿಸಿ, ವಿಜಯ ಪ್ರಕಾಶ್ ಹಾಡಿದ ಡ್ಯುಯೆಟ್ ಸಾಂಗನ್ನು ಮನಾಲಿಯಲ್ಲಿ ಶೂಟ್ ಮಾಡಿದ್ದೇವೆ. ಕೆಂಪೇಗೌಡ, ಮೋಹನ್ ಜುನೇಜಾ ಕಾಮಿಡಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಫ್ಯಾಮಿಲಿ ಕೂತು ನೋಡುವಂಥ ಚಿತ್ರ ಇದಾಗಿದ್ದು, ಚಿತ್ರವೀಗ ಸೆನ್ಸಾರ್ ಹಂತದಲ್ಲಿದೆ’ ಎಂದರು.
ಹಿರಿಯ ನಟ ಕೀರ್ತಿರಾಜ್ ಮಾತನಾಡಿ ಚಿತ್ರದಲ್ಲಿ ನಾನೊಬ್ಬ ಡಾನ್ ಆಗಿ ನಟಿಸಿದ್ದು, ಜೀವನದಲ್ಲಿ ನೊಂದ ನಾಯಕ, ನನ್ನ ಆಶ್ರಯಕ್ಕೆ ಬಂದು ಅಲ್ಲಿ ಹೇಗೆ ಬೆಳೆಯುತ್ತಾನೆಂಬುದೇ ಕಥೆ ಎಂದು ಹೇಳಿದರು.
ಸಂಗೀತ ನಿರ್ದೇಶಕ ಕೃಪಾಕರ್ ಮಾತನಾಡಿ, ಈ ಸಿನಿಮಾ ಕಚೋರಿಯಷ್ಟೇ ಚೆನ್ನಾಗಿದೆ. ಮೊದಲು ಹೊಸಬರನ್ನು ನಾಯಕರನ್ನಾಗಿ ಮಾಡಬೇಕೆಂದುಕೊಂಡಿದ್ದರು. ಕಾರಣಾಂತರಗಳಿಂದ ಅವರೇ ನಟಿಸಬೇಕಾಯಿತು. ಚಿತ್ರದಲ್ಲಿ 2 ಡ್ಯುಯೆಟ್, ಐಟಂ, ಟೀಸಿಂಗ್, ಫೀಲಿಂಗ್ ಸೇರಿ 5 ವೆರೈಟಿ ಹಾಡುಗಳಿವೆ. ಹೊಸ ಪ್ರತಿಭೆ ಪ್ರತಾಪ್ ರೆಡ್ಡಿ ಅವರಿಂದ ಹಾಡೊಂದನ್ನು ಬರೆಸಿದ್ದೇನೆ ಎಂದರು.
ನಾಯಕಿ ಇಳಾವಿಟ್ಲಾ ಅವರಿಗೆ ನಾಯಕಿಯಾಗಿ ಇದು 3ನೇ ಚಿತ್ರ. “ಕಾಲೇಜ್ ಯುವತಿ ನಂತರ ರಾಜಕಾರಣಿಯಾಗಿ 2 ಶೇಡ್ ಇರುವ ಪಾತ್ರ ಮಾಡಿದ್ದೇನೆ. ಯಾಕೆ ಅವಳು ಈಥರ ಮಾಡ್ತಾಳೆ ಅನ್ನೋದನ್ನು ಕಂಡುಹಿಡಿಯುವುದೇ ಚಿತ್ರದ ಎಳೆ’ ಎಂದರು. ಚಿತ್ರದಲ್ಲಿ ನಟಿಸಿರುವ ಕೆಂಪೇಗೌಡ, ಚಿತ್ರಕ್ಕೆ ಹಾಡು ಬರೆದಿರುವ ಪ್ರತಾಪ್ ರೆಡ್ಡಿ ಕೂಡಾ ತಮ್ಮ ಅನುಭವ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.