World cup 2023; ದಿಲ್ಲಿಯಲ್ಲಿ ಕೊಹ್ಲಿVs ನವೀನ್ ಫೈಟ್; ಟಾಸ್ ಗೆದ್ದ ಅಫ್ಘಾನ್


Team Udayavani, Oct 11, 2023, 1:33 PM IST

World cup 2023: India facing afghanistan

ಹೊಸದಿಲ್ಲಿ: ಏಕದಿನ ವಿಶ್ವಕಪ್ ಕೂಟದಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇಂದು ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಹೊಸದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅಫ್ಘಾನಿಸ್ಥಾನ ತಂಡವನ್ನು ರೋಹಿತ್ ಶರ್ಮಾ ಬಳಗ ಎದುರಿಸುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಇಂದಿನ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಅವರು ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇಂದಿನ ಪಂದ್ಯದಲ್ಲಿ ರವಿ ಅಶ್ವಿನ್ ಬದಲಿಗೆ ಶಾರ್ದೂಲ್ ಠಾಕೂರ್ ಅವಕಾಶ ಪಡೆದಿದ್ದಾರೆ.

ಅಫ್ಘಾನಿಸ್ಥಾನ ಕೆಳ ರ್‍ಯಾಂಕಿಂಗ್‌ ತಂಡವಾಗಿರಬಹುದು, ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಶರಣಾಗಿರಬಹುದು, ಆದರೆ ಅದು ಈ ಕೂಟದ ಅತ್ಯಂತ ಅಪಾಯಕಾರಿ ತಂಡ ಎಂಬುದನ್ನು ಮರೆಯಬಾರದು. ಇದಕ್ಕೆ ಕಳೆದ ವಿಶ್ವಕಪ್‌ ಪಂದ್ಯವೇ ಸಾಕ್ಷಿ. ಸೌತಾಂಪ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಅಂದಿನ ಗುಲ್ಬದಿನ್‌ ನೈಬ್‌ ಪಡೆ ಭಾರತವನ್ನು ಸೋಲಿಸುವ ಹಂತಕ್ಕೆ ಬಂದಿತ್ತು. ಆದರೆ ಕೊಹ್ಲಿ ಬಳಗದ ನಸೀಬು ಚೆನ್ನಾಗಿತ್ತು. ಅದು ದೊಡ್ಡ ಅವಮಾನದಿಂದ ಪಾರಾಯಿತು. ಭಾರತವನ್ನು 8ಕ್ಕೆ 224 ರನ್ನಿಗೆ ಹಿಡಿದು ನಿಲ್ಲಿಸಿದಾಗ ಎಲ್ಲರಲ್ಲೂ ಆತಂಕ ಮನೆಮಾಡಿತ್ತು. ಆದರೆ ನಮ್ಮ ಬೌಲರ್ ತಿರುಗೇಟು ನೀಡಲು ಯಶಸ್ವಿಯಾದರು. ಗೆಲುವಿನಿಂದ ಅಫ್ಘಾನ್‌ ಕೇವಲ 11 ರನ್ನುಗಳಿಂದ ಹಿಂದುಳಿಯಿತು.

ಇಂದು ಭಾರತ- ಅಫ್ಘಾನ್ ನಡುವಿನ ಪಂದ್ಯವಾದರೂ ಅಭಿಮಾನಿಗಳಿಗೆ ಮಾತ್ರ ಕೊಹ್ಲಿ- ನವೀನ್ ಉಲ್ ಹಕ್ ವಿರುದ್ಧ ಪಂದ್ಯದಂತಾಗಿದೆ. ಐಪಿಎಲ್ ಪಂದ್ಯದ ವೇಳೆ ಕೊಹ್ಲಿ- ನವೀನ್ ನಡುವೆ ಮಾತಿಕ ಚಕಮಕಿ ನಡೆದಿತ್ತು. ಬಳಿಕ ನವೀನ್ ಹೋದಲ್ಲೆಲ್ಲಾ ಅಭಿಮಾನಿಗಳು ಕೊಹ್ಲಿ ಹೆಸರು ಹೇಳೀ ರೇಗಿಸುತ್ತಾರೆ. ಇಂದು ಕೂಡಾ ಪಂದ್ಯ ಆರಂಭಕ್ಕೆ ಮೊದಲು ಅಭ್ಯಾಸ ನಡೆಸುತ್ತಿದ್ದ ನವೀನ್ ಗೆ ಇದೇ ಅನುಭವವಾಗಿದೆ.

ತಂಡಗಳು:

ಭಾರತ: ರೋಹಿತ್ ಶರ್ಮಾ (ನಾ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಅಪ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾ), ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ

ಟಾಪ್ ನ್ಯೂಸ್

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.