Kapu ಮಲ್ಲಾರು: ವಿವಾಹಿತ ಮಲಗಿದ್ದಲ್ಲೇ ಸಾವು
Team Udayavani, Oct 11, 2023, 11:07 PM IST
ಕಾಪು: ಮಲ್ಲಾರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರಕಾಶ್ (44) ಅವರು ಮಲಗಿದಲ್ಲಿಯೇ ಮೃತಪಟ್ಟ ಘಟನೆ ಅ. 11ರಂದು ಬೆಳಕಿಗೆ ಬಂದಿದೆ.
ವಿವಾಹಿತರಾಗಿದ್ದ ಪ್ರಕಾಶ್ ಅವರ ಪತ್ನಿ ಸುಮನಾ ಸಾಲ್ಯಾನ್ ಅವರು ಕಳೆದ ಐದು ವರ್ಷಗಳಿಂಂದ ಉದ್ಯಾವರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಉಡುಪಿಯ ಸ್ಮಾರ್ಟ್ ಬಜಾರ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಬುಧವಾರ ಬೆಳಗ್ಗೆ ಜಾಕೀರ್ ಹುಸೇನ್ ಅವರು ಪ್ರಕಾಶ್ ಮೃತಪಟ್ಟಿರುವ ವಿಚಾರ ತಿಳಿಸಿದ್ದರು. ಉಡುಪಿಯಿಂದ ಮಲ್ಲಾರಿಗೆ ಬಂದು ನೋಡಿದಾಗ ಪ್ರಕಾಶ್ ಮೃತಪಟ್ಟಿದ್ದು ಮೃತದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬಳಿಕ ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ನೇತೃತ್ವದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಪ್ರಕಾಶ್ ಕುಡಿತದಿಂದಾಗಿ ಅಥವಾ ಅನಾರೋಗ್ಯದಿಂದ ಮನೆಯಲ್ಲಿ ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.