Narendra Modi Stadium ಮೇಲೆ ದಾಳಿ ಬೆದರಿಕೆ; ಓರ್ವನ ಬಂಧನ
Team Udayavani, Oct 11, 2023, 11:36 PM IST
ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿರುವ ವ್ಯಕ್ತಿಯನ್ನು, ಅಹ್ಮದಾಬಾದ್ ಅಪರಾಧ ಪತ್ತೆ ದಳ ಬಂಧಿಸಿದೆ.
ತನ್ನ ಮೊಬೈಲ್ನಿಂದ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಈ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆಯನ್ನು ಹೊಂದಿಲ್ಲ. ಈತ ಮೂಲತಃ ಮಧ್ಯಪ್ರದೇಶದವನು, ಗುಜರಾತ್ನ ರಾಜ್ಕೋಟ್ ಹೊರವಲಯದಲ್ಲಿ ವಾಸಿಸುತ್ತಿದ್ದಾನೆ. ಮೇಲ್ ಅನ್ನು ಈತನೇ ಕಳಿಸಿದನೇ, ಈತನ ಖಾತೆಯನ್ನು ಯಾರಾದರೂ ದುರ್ಬಳಕೆ ಮಾಡಿಕೊಂಡರೇ ಅಥವಾ ಖಾತೆ ಹ್ಯಾಕ್ ಆಗಿದೆಯೇ ಎಂಬುದು ಗೊತ್ತಾಗಿಲ್ಲ.
ಭದ್ರತಾ ಪಡೆಗಳ ಕಟ್ಟೆಚ್ಚರ
ಭಾರತ-ಪಾಕಿಸ್ಥಾನ ಪಂದ್ಯ ಅ. 14ರಂದು ಇದೇ ಮೈದಾನದಲ್ಲಿ ನಡೆಯಲಿದೆ. ಆ ವೇಳೆ ಸ್ಟೇಡಿಯಂ ಹೌಸ್ಫುಲ್ ಆಗುವುದು ಖಾತ್ರಿ. ಒಂದೇ ಕಡೆ ಲಕ್ಷಾಂತರ ಜನರು ಸೇರುವ ಜಾಗದಲ್ಲಿ ಅನಾಹುತವಾದರೆ ಭಾರೀ ಎಡವಟ್ಟು ಸಂಭವಿಸುತ್ತದೆ. ಹೀಗಾಗಿ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್
World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು
ICC ವಿಶ್ವಕಪ್ ಸಾಧಕರ ತಂಡಕ್ಕೆ ರೋಹಿತ್ ನಾಯಕ; ತಂಡ ಹೀಗಿದೆ
World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಫುಲ್ ಖುಷ್
Head line ನಲ್ಲಿ ಮಿಂಚಿದ ಟ್ರ್ಯಾವಿಸ್ ಹೆಡ್
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.