Mangaluru ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಅ. 28, 29ರಂದು ಉಡುಪಿಯಲ್ಲಿ ನಡೆಯಲಿರುವ ಸಮ್ಮೇಳನ
Team Udayavani, Oct 11, 2023, 11:43 PM IST
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೇತೃತ್ವದಲ್ಲಿ ಅ. 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023ರ ಆಮಂತ್ರಣ ಪತ್ರಿಕೆ ಬಿಡುಗಡೆ ನಗರದಲ್ಲಿ ಬುಧವಾರ ಜರಗಿತು.
ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಐಕಳ ಹರೀಶ್ ಶೆಟ್ಟಿ ಅವರ ಸಂಘಟನಾ ಶಕ್ತಿ ಇತರರಿಗೆ ಮಾದರಿ. ವಿಶ್ವ ಬಂಟರ ಸಮ್ಮೇಳನದ ಮೂಲಕ ಹಲವಾರು ಪ್ರತಿಭೆಗಳಿಗೆ, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಆಗುತ್ತದೆ. ಒಂದೇ ವೇದಿಕೆಯಡಿ ಸಮಾಜದ ಎಲ್ಲರೂ ಪಾಲ್ಗೊಳ್ಳುವಂತಾಗಲಿ, ಸಮ್ಮೇಳನದಿಂದ ಸಮಾಜಕ್ಕೆ ಪ್ರಯೋಜನವಾಗಲಿ ಎಂದು ಹಾರೈಸಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ವಿಶ್ವ ಬಂಟರ ಸಮ್ಮೇಳನದ ಐತಿಹಾಸಿಕ ದಿನವನ್ನು ಎದುರು ನೋಡುತ್ತಿದ್ದು, ಅದು ಐತಿಹಾಸಿಕ ಸಮ್ಮೇಳನವಾಗಿ ಹೊರಹೊಮ್ಮಲಿ ಎಂದು ಆಶಿಸಿದರು.
ಸಮಾಜದ ಶಕ್ತಿ ಪ್ರದರ್ಶನ
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, ದೊಡ್ಡ ಸಂಖ್ಯೆಯಲ್ಲಿ ನಮ್ಮ ಸಮುದಾಯದ ಜನರನ್ನು ಸೇರಿಸುವ ಮೂಲಕ ನಮ್ಮ ಶಕ್ತಿಯನ್ನು ಈ ಮೂಲಕ ತೋರಿಸಿಕೊಡಬೇಕು ಎಂದರು.
ಬಂಟ್ಸ್ ವೆಲ್ಫೆರ್ ಟ್ರಸ್ಟ್‌ನ ಅಧ್ಯಕ್ಷ ಡಾ| ಎ. ಸದಾನಂದ ಶೆಟ್ಟಿ ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಹೊಸ ದಿಕ್ಕು ತೋರಿಸಿದವರು ಐಕಳ ಹರೀಶ್ ಶೆಟ್ಟಿ. ಬಲಿಷ್ಟ ಸಮಾಜದ ನಿರ್ಮಾಣಕ್ಕೆ ಬಂಟರ ಸಮ್ಮೇಳನದ ಯಶಸ್ಸಿಗೆ ನಾವೆಲ್ಲರೂ ಒಟ್ಟಾಗಿ ದುಡಿಯೋಣ ಎಂದರು.
ಉದ್ಘಾಟನೆಗೆ ಮುಖ್ಯಮಂತ್ರಿ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಅ. 28ರಂದು ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಮುದಾಯದ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ತರುವ ಉದ್ದೇಶದಿಂದ ಸಮ್ಮೇಳನ ಆಯೋಜನೆ ಮಾಡಿದ್ದೇವೆ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಚಟುವಟಿಕೆ ವಿವರಿಸಿ, ಅ. 28ರಂದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಮತ್ತು ಅ. 29ರಂದು ಉಡುಪಿಯ ಶ್ರೀಮತಿ ಅಮ್ಮಣಿ ರಾಮಣ್ಣ ಶೆಟ್ಟಿ ತೆರೆದ ಮೈದಾನದಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದರು.
ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕೋಶಾಧಿಕಾರಿ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಸುಧಾಕರ ಎಸ್. ಪೂಂಜ, ಎ. ಜಗನ್ನಾಥ ಚೌಟ, ಲೋಕೇಶ್ ಶೆಟ್ಟಿ, ಸುರೇಶ್ ರೈ ಮಕರಜ್ಯೋತಿ ಉಪಸ್ಥಿತರಿದ್ದರು.
ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.