Education: ಮುಂದಿನ ವರ್ಷ 500 ಕರ್ನಾಟಕ ಪಬ್ಲಿಕ್ ಶಾಲೆ: ಮಧು ಬಂಗಾರಪ್ಪ
Team Udayavani, Oct 11, 2023, 11:57 PM IST
ಬೆಂಗಳೂರು: ಮುಂದಿನ ಆರ್ಥಿಕ ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಯಂತೆ 5 ವರ್ಷದಲ್ಲಿ 5 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಗುರಿ ಹೊಂದಿದ್ದೇವೆ ಎಂದು ಶಿಕ್ಷಣ ಮತ್ತು ಸಾರಕ್ಷತ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇತ್ತೀಚೆಗೆ ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಕುರಿತು ಹೈಕೋರ್ಟ್ ವ್ಯಕ್ತಪಡಿಸಿರುವ ಆಕ್ಷೇಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ಅಧಿಕಾರಕ್ಕೆ ಬಂದು 140 ದಿನಗಳಾಗಿವೆ. ನಾವು ಯಾವ ಶೌಚಾಲಯವನ್ನೂ ಹಾಳು ಮಾಡಿಲ್ಲ. ಸರಕಾರಿ ಶಾಲೆ ತೊರೆದು ಖಾಸಗಿ ಶಾಲೆಗೆ ಹೋಗುವುದನ್ನು ನಾವೂ ಒಪ್ಪುವುದಿಲ್ಲ. ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳಿದ್ದರೆ ಖಾಸಗಿ ಶಾಲೆಗೆ ಹೋಗುವ ಪ್ರಮೇಯವೇ ಬರುವುದಿಲ್ಲ ಎಂದರು.
ಕೆಪಿಎಸ್ ಮಕ್ಕಳಿಗೆ ವಾಹನ ವ್ಯವಸ್ಥೆ
ಸರಕಾರಿ ಶಾಲೆ ಬಿಟ್ಟು ಹೋಗುವುದನ್ನು ತಪ್ಪಿಸುವ ಸಲುವಾಗಿ ಉತ್ತಮ ದರ್ಜೆಯ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಯೋಜಿಸಿದ್ದು, ಮುಂದಿನ ವರ್ಷ 500 ಕೆಪಿಎಸ್‌ಗಳನ್ನು ಆರಂಭಿಸುವ ಸಂಬಂಧ ಬಜೆಟ್‌ನಲ್ಲಿ ಅನುದಾನ ಹಂಚಿಕೆಗೆ ಕೋರಲಾಗುತ್ತದೆ. ಇಲ್ಲಿ ಎಲ್ಲ ಸೌಕರ್ಯಗಳನ್ನೂ ಒದಗಿಸಲಾಗುತ್ತದೆ. ಕನಿಷ್ಠ ನಾಲ್ಕೈದು ಕಿ.ಮೀ. ದೂರದ ಮಕ್ಕಳಿಗೂ ವಾಹನ ಸೌಲಭ್ಯ ನೀಡಿ ಸಸಕಾರಿ ಶಾಲೆ ಬಿಟ್ಟು ಹೋಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅಲ್ಲದೆ, ಅಜೀಮ್ ಪ್ರೇಮ್‌ಜೀ ಪ್ರತಿಷ್ಠಾನದಿಂದ ಶಿಕ್ಷಕರಿಗೆ ತರಬೇತಿ ಕೊಡಿಸುವುದು, ಸಿಎಸ್‌ಆರ್ ಫಂಡ್ ಮೂಲಕ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಯೋಜನೆಗಳಿದ್ದು, ಎಲ್ಲವೂ ಒಂದು ಹಂತಕ್ಕೆ ಸರಿ ಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ 464 ಸರಕಾರಿ ಶಾಲೆಗಳಲ್ಲಿ ಶೌಚಾಲಯ ಇಲ್ಲ. 87 ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಹೈಕೋರ್ಟ್‌ನಲ್ಲಿ ದಾಖಲಾಗಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹಿರಿಯ ವಕೀಲ ಕೆ.ಎನ್. ಫಣೀಂದ್ರ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.