![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 12, 2023, 12:02 AM IST
ಬೆಂಗಳೂರು: ಸುಪ್ರೀಂಕೋರ್ಟ್‌ನಲ್ಲಿ ದಾಖಲಾಗುವ ರಾಜ್ಯ ಸರಕಾರದ ವ್ಯಾಜ್ಯಗಳನ್ನು ಸಮರ್ಪಕವಾಗಿ ಹಾಗೂ ಕಾಲಮಿತಿಯೊಳಗೆ ಜವಾಬ್ದಾರಿಯುತವಾಗಿ ನಿರ್ವಹಿಸುವ ಬಗ್ಗೆ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ತಾಕೀತು ಮಾಡಿ ಸುತ್ತೋಲೆ ಹೊರಡಿಸಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಿಳಂಬ ಇಲ್ಲವೇ ಲೋಪಗಳಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಸೂಕ್ತ ಕ್ರಮ ಜರಗಿಸಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.
ಬಿಹಾರ ರಾಜ್ಯ ಸರಕಾರಿ ಕರ್ಮಚಾರಿ ಮಹಾ ಸಂಘ ವರ್ಸಸ್ ಭಾರತ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಸ್ತುತ ರಾಜ್ಯದಲ್ಲಿ ಜಾರಿಗೆ ತಂದಿರುವ ಕರ್ನಾಟಕ ಸರಕಾರಿ ವ್ಯಾಜ್ಯ ನಿರ್ವಹಣ ಅಧಿನಿಯಮ-2023ರ ಅನ್ವಯ ಎಲ್ಲ ಇಲಾಖೆಗಳು ವ್ಯಾಜ್ಯ ನಿರ್ವಹಣೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ಕಾಲಮಿತಿಯೊಳಗೆ ಮಾಡಬೇಕು. ಅದರಂತೆ, ಪ್ರಕರಣ ದಾಖಲಾಗಿರುವ ಮಾಹಿತಿ ಲಭ್ಯವಾದ ತತ್‌ಕ್ಷಣ ಸರಕಾರದ ಪರವಾಗಿ ನ್ಯಾಯವಾದಿಗಳನ್ನು ನಿಯೋಜಿಸಬೇಕು. ಇನ್ನುಳಿದ ಕಾನೂನು ಪ್ರಕ್ರಿಯೆಗಳನ್ನು ತ್ವರಿತ ರೀತಿಯಲ್ಲಿ ಕೈಗೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ವಿಳಂಬ ಮಾಡಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕಾನೂನು ಕ್ರಮ ಕ್ರಮ ಜರಗಿಸಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.