World Cup 2023; ಭಾರತ- ಅಫ್ಘಾನ್ ಪಂದ್ಯದ ವೇಳೆ ಮಾರಾಮಾರಿ; ವಿಡಿಯೋ ವೈರಲ್
Team Udayavani, Oct 12, 2023, 10:33 AM IST
ಹೊಸದಿಲ್ಲಿ: ಐಸಿಸಿ ಕ್ರಿಕೆಟ್ ಏಕದಿನ ವಿಶ್ವಕಪ್ ನ ತನ್ನ ಎರಡನೇ ಪಂದ್ಯದಲ್ಲಿಯೂ ಭಾರತ ತಂಡವು ಗೆಲುವು ಸಾಧಿಸಿದೆ. ಅಫ್ಘಾನಿಸ್ಥಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ ಅಂತರದಿಂದ ಸುಲಭ ಗೆಲುವು ಸಾಧಿಸಿದೆ.
ನಾಯಕ ರೋಹಿತ್ ಶರ್ಮಾ ಅವರ ಭರ್ಜರಿ ಶತಕದ ನೆರವಿನಿಂದ ಭಾರತ ಸುಲಭ ಗೆಲುವು ಕಂಡಿತು. ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮನ ಮಾಡಿದ ರೋಹಿತ್, ಕೇವಲ 84 ಎಸೆತಗಳಲ್ಲಿ 131 ರನ್ ಗಳಿಸಿದರು.
ಆದರೆ ಈ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕುಳಿತಿದ್ದ ಪ್ರೇಕ್ಷಕರ ನಡುವೆ ಗಲಾಟೆಯಾಗಿದೆ. ಅರುಣ್ ಜೇಟ್ಲಿ ಸ್ಟೇಡಿಯಂನ ಸ್ಟ್ಯಾಂಡ್‌ನಲ್ಲಿ ಭಾರತೀಯ ಅಭಿಮಾನಿಗಳು ದೈಹಿಕ ಜಗಳದಲ್ಲಿ ತೊಡಗಿರುವ ವೀಡಿಯೊ ವೈರಲ್ ಆಗಿದೆ. ವಿವಾದದ ಕಾರಣ ಅಸ್ಪಷ್ಟವಾಗಿಯೇ ಉಳಿದಿದೆ. ಆದರೆ ಅಭಿಮಾನಿಗಳು ಪರಸ್ಪರ ಗುದ್ದಾಡಿಕೊಂಡಿದ್ದಾರೆ.
ಭಾರತೀಯ ಅಭಿಮಾನಿಗಳು ಅಫ್ಘಾನಿಸ್ಥಾನ ಅಭಿಮಾನಿಗೆ ಹೊಡೆದಿದ್ದಾರೆ ಎಂದು ಟ್ವಟ್ಟರ್ ನಲ್ಲಿ ಹಲವರು ಬರೆದುಕೊಂಡಿದ್ದಾರೆ. ಆದರೆ ನಿಖರ ಮಾಹಿತಿ ಲಭ್ಯವಾಗಿಲ್ಲ.
Fight between fans at the Arun Jaitley Stadium in Delhi.
Reason: **Unknown !!#INDvAFG #ICCMensCricketWorldCup2023 #ICCWorldCup2023 pic.twitter.com/0ZDNnB3DUo
— 𝐒𝐀𝐒 𝐎𝐟𝐟𝐢𝐜𝐢𝐚𝐥™ (@sasofficial23) October 12, 2023
ಹೊಸದಿಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ಥಾನವು 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಭಾರತವು ರೋಹಿತ್ ಮತ್ತು ವಿರಾಟ್ ಕೊಹ್ಲಿ ಬ್ಯಾಟಿಂಗ್ ನೆರವಿನಿಂದ ಕೇವಲ ಎರಡು ವಿಕೆಟ್ ನಷ್ಟಕ್ಕೆ 35 ಓವರ್ ಗಳಲ್ಲಿ ಗುರಿ ತಲುಪಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.