Panaji: ದೇಶದ ಅಭಿವೃದ್ಧಿಯಲ್ಲಿ ನಮ್ಮ ಪಾಲು ಇರಬೇಕಾದರೆ ನಮಗೆ ಶಿಕ್ಷಣ ಅತಿ ಅಗತ್ಯ

Team Udayavani, Oct 12, 2023, 2:36 PM IST

11-panaji

ಪಣಜಿ: ಗೋವಾದ ಬೈನಾದಲ್ಲಿರುವ ಈ ಕನ್ನಡ ಶಾಲೆಯ ದುಸ್ಥಿತಿಯನ್ನು ಕಂಡು ನನಗೆ ತುಂಬಾ ಬೇಸರವಾಯಿತು. ನಾನು 1979 ರಲ್ಲಿ ನನ್ನ ಊರಲ್ಲಿ ಕಲಿತ ಶಾಲೆ ಇನ್ನೂ ಎಷ್ಟೋ ಉತ್ತಮವಾಗಿತ್ತು ಎಂದು ಗೋವಾ ರಾಜ್ಯ ಬಿಜೆಪಿ ಕರ್ನಾಟಕ ಸೆಲ್‍ನ ಕನ್ವೀನಿಯರ್ ಹಾಗೂ ಹೋಟೆಲ್ ಉದ್ಯಮಿ ಮುರಳಿ ಮೋಹನ್ ಶೆಟ್ಟಿ ಹೇಳಿದರು.

ಗೋವಾದ ವಾಸ್ಕೊದ ಬೈನಾದಲ್ಲಿರುವ ಶ್ರೀ ಯಲ್ಲಾಲಿಂಗೇಶ್ವರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಉಚಿತ ಸಮವಸ್ತ್ರ ವಿತರಣೆ ಹಾಗೂ ಹೃದಯವಂತ ಕನ್ನಡ ಕಣ್ಮಣಿಗಳ ಸನ್ಮಾನ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕಲಿಯಲು ಒಂದು ವಾತಾವರಣ ಬೇಕು. ಈ ಶಾಲೆ ಅಭಿವೃದ್ಧಿಯಾಗಬೇಕಾದರೆ ಸ್ಥಳೀಯ ಶಾಸಕರ ಮೂಲಕ ಮತ್ತು ಕರ್ನಾಟಕ ಸರ್ಕಾರದ ಬಳಿ ಒತ್ತಡ ಹೇರುವ ಮೂಲಕ ಗೋವಾದ ಕನ್ನಡ ಶಾಲೆಯನ್ನು ಅಭಿವೃದ್ಧಿಪಡಿಸಬೇಕು. ಇಲ್ಲಿ ಮೂಲ ಸೌಕರ್ಯಕ್ಕೆ ಬೇಕಾದ ವ್ಯವಸ್ಥೆಗೆ ನಾನು ಕೂಡ ಅಗತ್ಯ ಸಹಾಯ ಮಾಡುತ್ತೇನೆ ಎಂದರು.

ಸಮವಸ್ತ್ರ ಎಂದರೆ ಎಲ್ಲರೂ ಸಮನಾಗಿರುವುದು ಎಂದರ್ಥ. ಶಾಲೆಯಲ್ಲಿ ಎಲ್ಲರೂ ಯಾವುದೇ ಬೇಧ-ಭಾವವಿಲ್ಲದೆ ವಿದ್ಯಾಭ್ಯಾಸ ಮಾಡುವಂತಾಗಬೇಕು. ಶಾಲೆಯಲ್ಲಿ ಬಡವ, ಶ್ರೀಮಂತ ಎಂಬ ಬೇಧ-ಭಾವವಿರಬಾರದು. ಶಿಕ್ಷಕರು ಕೂಡ ಪಾಠ ಮಾಡುವಾಗ ಯಾರು ದೊಡ್ಡವರು ಚಿಕ್ಕವರು ಎಂಬ ಬೇಧ ಭಾವ ಮಾಡುವುದಿಲ್ಲ ಎಂದ ಅವರು, ನಮ್ಮ ಕಾಲದಲ್ಲಿ ನಮಗೆ ಯಾರೂ ಸಮವಸ್ತ್ರ ವಿತರಣೆ ಮಾಡುತ್ತಿರಲಿಲ್ಲ. ಆದರೆ ಇಂದು ವಿದ್ಯಾರ್ಥಿಗಳಿಗೆ ಅವರ ಪಾಲಕರು ಕೂಡ ಶಿಕ್ಷಣ ಕೊಡಿಸಲು ಸಾಕಷ್ಟು ಖರ್ಚು ಮಾಡುತ್ತಾರೆ. ವಿದ್ಯಾರ್ಥಿಗಳು ಇದೆಲ್ಲವನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕನ್ನಡ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಿದ ಗೋವಾ ರಾಜ್ಯ ಬಿಜೆಪಿ ಕರ್ನಾಟಕ ಸೆಲ್‍ನ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಮಾತನಾಡಿ, ಇಂದಿನ ಕಾಲದಲ್ಲಿ ಯಾವುದೇ ರೀತಿ ಮುಂದುವರೆಯಲು ಮತ್ತು ನಮ್ಮ ದೇಶದ ಅಭಿವೃದ್ಧಿಯಲ್ಲಿ ನಮ್ಮ ಪಾಲು ಇರಬೇಕಾದರೆ ನಮಗೆ ಶಿಕ್ಷಣ ಅತಿ ಮುಖ್ಯ. ಚಂದ್ರಯಾನ 3 ಯಶಸ್ವಿ ಉಡಾವಣೆ ಮಾಡಿ ನಮ್ಮ ದೇಶಕ್ಕೆ ಕೀರ್ತಿ ತಂದುಕೊಟ್ಟಿದ್ದು ನಮ್ಮ ವಿಜ್ಞಾನಿಗಳು. ಇಂದಿನ ವಿದ್ಯಾರ್ಥಿಗಳು ಕೂಡ ಈ ನಿಟ್ಟಿನಲ್ಲಿ ಸಾಧನೆ ಮಾಡಲು ಉತ್ತಮ ಶಿಕ್ಷಣ ಅಗತ್ಯ ಎಂದರು.

ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಉಪಸ್ಥಿತರಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯಾಧ್ಯಕ್ಷ ಮಂಜು ನಾಟೀಕರ್ ಮಾತನಾಡಿ, ನಾನು ಶಿಕ್ಷಣ ಪಡೆದಿದ್ದು ಕೂಡ ಇದೇ ಶಾಲೆಯಲ್ಲಿ. ಈ ಶಾಲೆಯಲ್ಲಿ ಹಲವು ಕುಂದು-ಕೊರತೆಯನ್ನು ಪರಿಹರಿಸಲು ನಾವು ಸರ್ಕಾರದ ಮೂಲಕ ಹೋರಾಟ ನಡೆಸುವ ಅಗತ್ಯವಿದೆ. ಈ ಕನ್ನಡ ಶಾಲೆಯನ್ನು ಅಭಿವೃದ್ಧಿಪಡಿಸಿ ಶಾಲೆಗೆ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳನ್ನು ಕರೆತರಲು ಸಾಧ್ಯವಾಗುತ್ತದೆ. ಇದಕ್ಕೆ ನಾವು ಸತತ ಹೋರಾಡಲು ಸಿದ್ಧರಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮಹೇಶ ಬಳಬಟ್ಟಿ, ಬಸವರಾಜ ಗೌಡರ್, ಶಾಲೆಯ ಮುಖ್ಯ ಅಧ್ಯಾಪಕ ಪಿ.ವಿ.ಪಾಟೀಲ್,  ಶಿವಾನಂದ ಮಸಬಿನಾಳ, ಪತ್ರಕರ್ತ ಅನೀಲ ಸನದಿ, ಪ್ರಕಾಶ ಭಟ್, ವೀರಶೈವ ಲಿಂಗಾಯತ ಸಮಾಜದ ಜುವಾರಿನಗರ ಅಧ್ಯಕ್ಷ ರುದ್ರಯ್ಯ ಹಿರೇಮಠ, ರಾಮನಗೌಡ ಕಾರಟಿ, ಮತ್ತಿತರರು ಉಪಸ್ಥಿತರಿದ್ದು ಮಾತನಾಡಿದರು.

ಸಂಗೀತ ಶಿಕ್ಷಕ ಬಾಬು ಬೂಸಾರಿ ಹಚ್ಚೇವು ಕನ್ನಡದ ದೀಪ ಗೀತೆ ಹಾಡಿದರು. ಶಾಲಾ ವಿದ್ಯಾರ್ಥಿಗಳು ಸ್ವಾಗತ ಗೀತೆ ಹಾಡಿದರು. ಶಿಕ್ಷಕ ಪಿವಿ ಪಾಟೀಲ್ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದರು. ಹಿರಿಯ ಶಿಕ್ಷಕ ಸುಧೀರ ಬೆಂಡೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವನಜಾ ರೊಸಲಿನ್ ವಂದಿಸಿದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.