Politics: “ಕೈ” ಸೇರಲು 42 ಮಂದಿ ಅರ್ಜಿ-ಹೊಸ ಮಾಹಿತಿ ಕೊಟ್ಟ ಡಿಸಿಎಂ ಡಿಕೆಶಿ
Team Udayavani, Oct 12, 2023, 10:52 PM IST
ಬೆಂಗಳೂರು: ಕಾಂಗ್ರೆಸ್‌ಗೆ ಸೇರಬಹುದಾದ ವಿವಿಧ ಪಕ್ಷಗಳ 42 ಮಂದಿಯ ಅರ್ಜಿಗಳು ನನ್ನ ಮುಂದೆ ಇವೆ. ಬೀದರ್‌ನಿಂದ ಚಾಮರಾಜನಗರದ ತನಕ ಕಾಂಗ್ರೆಸ್ ಸೇರಲು ಹಲವರು ಉತ್ಸುಕರಾಗಿದ್ದಾರೆ…
ಹೀಗೆಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುತೂಹಲಕಾರಿ ಅಂಶವನ್ನು ಗುರುವಾರ ಬಹಿರಂಗಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೆಲವು ತಿಂಗಳುಗಳಲ್ಲೇ ಪತನಗೊಳ್ಳಲಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನಡುವೆಯೇ ಬಿಜೆಪಿಯ ತಂಡ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡುತ್ತಿದೆ ಎಂಬ ಉಪಮುಖ್ಯಮಂತ್ರಿಯವರ ಹೇಳಿಕೆಯೂ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದೆ.
ಜೆಡಿಎಸ್, ಬಿಜೆಪಿಯ ಕೆಲವು ಮಾಜಿ ಶಾಸಕರು ಹಾಗೂ ಮಾಜಿ ಸಚಿವರು ಕಾಂಗ್ರೆಸ್ ಸೇರುತ್ತಿರುವ ಬೆನ್ನಲ್ಲೇ, ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್‌ನ ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬುದಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಯಿಂದ ಮತ್ತಷ್ಟು ಪುಷ್ಟಿ ದೊರೆತಿದೆ. ಬಿಜೆಪಿಯ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.
42 ಮಂದಿ ಅರ್ಜಿ ಕೈಯಲ್ಲಿವೆ
ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ತಂದು ಚರ್ಚಿಸಿದ್ದಾರೆ. ಆ 42ಕ್ಕೂ ಹೆಚ್ಚು ಹೆಸರುಗಳನ್ನು ಈಗ ಬಹಿರಂಗಪಡಿಸುವುದಿಲ್ಲ. ಸ್ಥಳೀಯ ನಾಯಕರ ಜತೆ ಚರ್ಚಿಸಿ ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಡಿಕೆಶಿ ಹೇಳಿದರು.
ಕೆಲವರು 2024ರಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿ¨ªಾರೆ. ಅದರ ವಿವರಣೆಗೆ ನಾನು ಹೋಗುವುದಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.