Ganesha Procession: ಗಣೇಶ ಮೆರವಣಿಗೆಗೆ ಅಡ್ಡಿ:ಹಿಂದೂ ಸಂಘಟನೆಗಳ ಪ್ರತಿಭಟನೆ
Team Udayavani, Oct 13, 2023, 2:54 PM IST
ದಾವಣಗೆರೆ: ನಗರದ ಬಸವರಾಜಪೇಟೆಯಲ್ಲಿ ಆ.13ರ ಗುರುವಾರ ರಾತ್ರಿ ಗಣೇಶೋತ್ಸವ ಮೆರವಣಿಗೆಗೆ ಅಡ್ಡಿಪಡಿಸಿದವರ ವಿರುದ್ಧ ಸೂಕ್ತ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆಗಳು ಬಡಾವಣಾ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದವು.
ಮಹಾರಾಜರ ಯುವಕರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭ ಅನ್ಯ ಕೋಮಿನವರು ಅಡ್ಡಿಪಡಿಸಿದ್ದಾರೆ.
ನಮ್ಮ ಹಾದಿಯಲ್ಲಿ ಡಿ.ಜೆ. ಹಾಕುವಂತಿಲ್ಲ ಎಂದು ದೌರ್ಜನ್ಯವೆಸಗಿ ಮೆರವಣಿಗೆ ಬಂದ್ ಮಾಡಿಸಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಜಯದೇವ ವೃತ್ತದಿಂದ ಬಡಾವಣೆ ಪೊಲೀಸ್ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದೌರ್ಜನ್ಯ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಬಂಧಿಸಿ ಗಡಿಪಾರು ಮಾಡಬೇಕು. ಜಿಲ್ಲಾ ರಕ್ಷಣಾಧಿಕಾರಿ ಸ್ಥಳಕ್ಕೆ ಬಂದು ಅಹವಾಲು ಆಲಿಸಬೇಕು ಎಂದು ಪಟ್ಟುಹಿಡಿದರು.
ಗಣೇಶ ಮೆರವಣಿಗೆಗೆ ಅಡ್ಡಿಪಡಿಸಿದವರ ಬದಲಿಗೆ ಮೆರವಣಿಗೆಯಲ್ಲಿದ್ದವರಿಗೇ ಥಳಿಸಿ, ಡಿಜೆ ಕಿತ್ತು ಹಾಕಿದಂತಹ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದೂ ಒತ್ತಾಯಿಸಿದರು.
ಕೆಲ ಸಮಯದ ನಂತರ ಪ್ರತಿಭಟನೆ ಸ್ಥಳಕ್ಕೆ ಬಂದ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಮನವಿ ಪತ್ರವನ್ನು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.