Ghost: ಮೈಸೂರಿನಲ್ಲಿ ‘ಘೋಸ್ಟ್’ ಮೆರವಣಿಗೆ
Team Udayavani, Oct 14, 2023, 3:32 PM IST
ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್. ನಿರ್ಮಾಣದ ಹಾಗೂ ಶ್ರೀ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಘೋಸ್ಟ್ ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ಮೆರವಣಿಗೆ ನಡೆಯಲಿದೆ.
ಜ್ವಾಲಾಮುಖಿ ಡಾ.ರಾಜ್‌ಕುಮಾರ್ ಅಭಿಮಾನಿಗಳ ಬಳಗ ಈ ಅದ್ಧೂರಿ ಮೆರವಣಿಗೆ ಆಯೋಜಿಸಿದೆ. ಡೋಲು, ನಗರಿ, ಕೇರಳದ ಚೆಂಡೆ, ತಮಟೆ ಮೊದಲಾದ ವಾದ್ಯಗಳು, ಜಾನಪದ ಕಲಾ ತಂಡಗಳು, ನೂರೈವತ್ತಕ್ಕೂ ಆಟೋಗಳಲ್ಲಿ ನಕ್ಷತ್ರಗಳು ಈ ಮೆರವಣಿಗೆಯ ಪ್ರಮುಖ ಆಕರ್ಷಣೆ. ಸಾವಿರಾರು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಮೈಸೂರಿನ ಇಟ್ಟಿಗೆಗೂಡಿನಿಂದ ಆರಂಭವಾಗುವ ಮೆರವಣಿಗೆ ಡಿಸಿ ಕಛೇರಿ ಮೂಲಕ ಸಾಗಿ ವುಡ್‌ಲ್ಯಾಂಡ್ಸ್ ಮಂದಿರ ತಲುಪಲಿದೆ.
ಕರುನಾಡ ಚಕ್ರವರ್ತಿ ಡಾ.ಶಿವರಾಜ ಕುಮಾರ್, ನಿರ್ಮಾಪಕರಾದ ಸಂದೇಶ್ ಮುಂತಾದವರು ಈ ಅದ್ಧೂರಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.ಮೈಸೂರಿನಲ್ಲಿ ಈಗ ದಸರಾ ಸಡಗರ. ಅದರೊಂದಿಗೆ ಘೋಸ್ಟ್ ಚಿತ್ರ ಸಹ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಆನಂದವನ್ನು ಮತ್ತಷ್ಟು ಹೆಚ್ಚಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.