BJP ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಅಂತ ಹೇಳುವ ಕಾಲ ಬಂದಿದೆ :ರೇಣುಕಾಚಾರ್ಯ
ಪಕ್ಷ ಬಿಡುತ್ತೇನೆ ಅಂತ ಎಲ್ಲಿಯೂ ಹೇಳಿಲ್ಲ
Team Udayavani, Oct 14, 2023, 7:48 PM IST
ದಾವಣಗೆರೆ: ಸ್ವಪಕ್ಷದ ವಿರುದ್ಧ ಮತ್ತೆ ಗುಡುಗಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು, ರಾಜ್ಯದಲ್ಲಿ ಬಿಜೆಪಿಗೆ ಸಮರ್ಥ ನಾಯಕ ಇಲ್ಲ ಎಂದು ಶನಿವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ”ಪಕ್ಷ ಸಂಘಟನೆ ಮಾಡಿದ ಯಡಿಯೂರಪ್ಪ ಅವರ ಕೈಕಟ್ಟಿ ಹಾಕಿದ್ದಾರೆ. ಅವರಿಗೆ ಪ್ರವಾಸ ಮಾಡಲು ಅವಕಾಶ ನೀಡುತ್ತಿಲ್ಲ. ಬಿಜೆಪಿ ಕಟ್ಟಿ ಬೆಳೆಸಿದವರನ್ನು ಮೂಲೆಗುಂಪು ಮಾಡಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಅಂತ ನಾವು ಹೇಳುತ್ತಿದ್ದೆವು. ಆದರೆ ಇಂದು ಬಿಜೆಪಿ ಮುಳುಗುತ್ತಿರುವ ಹಡಗು ಅಂತ ನಮ್ಮವರೆ ಹೇಳುವ ಕಾಲ ಬಂದಿದೆ. ಬಿಜೆಪಿಯಲ್ಲಿ ಕಾರ್ಪೋರೇಟ್ ರೀತಿ ತಂಡ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ. ಗೆದ್ದಲು ಕಟ್ಟಿದ ಹುತ್ತದಲ್ಲಿ ಹಾವುಗಳು ಬಂದು ವಾಸವಾದಂತೆ ಆಗಿದೆ. ವಿಧಾನಪರಿಷತ್ ಸದಸ್ಯರು, ಬಿಜೆಪಿ ರಾಜ್ಯಾಧ್ಯಕ್ಷರು, ಯಾರ ತಂಡದಲ್ಲಿ ಗುರುತಿಸಿಕೊಂಡವರು ಅಂತ ಗೊತ್ತಾಗುತ್ತದೆ” ಎಂದು ಕಿಡಿ ಕಾರಿದರು.
”ಮೋದಿಯವರಿಗೆ ಸುಳ್ಳು ಮಾಹಿತಿ ನೀಡಿ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣರಾಗಿದ್ದಾರೆ. ಸಮರ್ಥ ನಾಯಕನ ಆಯ್ಕೆ ಮಾಡಿದರೆ ಪಕ್ಷದಲ್ಲಿ ಮತ್ತೆ ಹೊಸತನ ಬರುತ್ತದೆ. ಪಕ್ಷ ಸಂಘಟನೆ ಮಾಡಲು ಸಹಕಾರಿಯಾಗುತ್ತದೆ, ಹೊಸ ತಂಡ ರಚನೆ ಆಗುತ್ತದೆ. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವ ಬದಲಾಗಿ ಅವರ ಕೈಯಲ್ಲಿ ಅಧಿಕಾರ ಕೊಟ್ಟು ನೋಡಿ.ರಾಜ್ಯದಲ್ಲಿ ಇದೆ ಪರಿಸ್ಥಿತಿ ಮುಂದುವರೆದರೆ ಲೊಕಸಭೆ ಚುನಾವಣೆ ಹೊತ್ತಿಗೆ ಪಕ್ಷ ಬಿಡುವವರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ” ಎಂದು ”ನಾನಂತು ಪಕ್ಷ ಬಿಡುತ್ತೇನೆ ಅಂತ ಎಲ್ಲಿಯೂ ಹೇಳಿಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.