Sringeri: ಇಂದಿನಿಂದ ನವರಾತ್ರಿ ಉತ್ಸವ
Team Udayavani, Oct 15, 2023, 6:23 AM IST
ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಅ.15 ರಿಂದ 25 ರವರೆಗೆ ಶರನ್ನವರಾತ್ರಿ ಉತ್ಸವ ನಡೆಯಲಿದೆ. ನವರಾತ್ರಿ ಹಿಂದಿನ ದಿನ ಅ.14 ರಂದು ಭಾದ್ರಪದ ಅಮಾವಾಸ್ಯೆಯ ದಿನ ಜಗನ್ಮಾತೆಗೆ ಮಹಾಭಿಷೇಕ ನೆರವೇರಿತು.
ಶ್ರೀ ಶಾರದೆಗೆ ಅನೇಕ ವಿಧವಾದ ಫಲ- ಪಂಚಾಮೃತ ಅಭಿಷೇಕದ ಬಳಿಕ ಮಹಾನ್ಯಾಸಪೂರ್ವಕ ಶತರುದ್ರಾಭಿಷೇಕ ಹಾಗೂ 108 ಶ್ರೀಸೂಕ್ತ ಪಠಣದಿಂದ ಅಭಿಷೇಕ ನೆರವೇರಿತು. ಅಂದು ಶ್ರೀಶಾರದೆ ಜಗತøಸೂತಿಕಾ ಅಲಂಕಾರದಲ್ಲಿ ಕಂಗೊಳಿಸಿದಳು.
ಅ.15ರಂದು ಶ್ರೀ ಶಾರದಾಪ್ರತಿಷ್ಠೆ, ಬ್ರಾಹ್ಮಿ ಅಲಂಕಾರ, ಅ.16 -ಹಂಸವಾಹಿನಿ, ಅ.17-ಮಾಹೇಶ್ವರೀ, ಅ.18 ಮಯೂರವಾಹನಾಲಂಕಾರ, ಅ.19-ವೈಷ್ಣವೀ ಅಲಂಕಾರ, ಶತಚಂಡೀಯಾಗದ ಪ್ರಯುಕ್ತ ಶಾಲಾ ಪ್ರವೇಶ, ಪುರಶ್ಚರಣಾರಂಭ, ಅ.20-ಸರಸ್ವತ್ಯಾವಾಹನೆ, ವೀಣಾ ಶಾರದಾಲಂಕಾರ, ಅ.21-ಮೋಹಿನೀ ಅಲಂಕಾರ, ಅ.22- ರಾಜರಾಜೇಶ್ವರಿ ಅಲಂಕಾರ, ಅ.23-ಮಹಾನವಮಿ, ಸಿಂಹವಾಹನಾಲಂಕಾರ, ಶತಚಂಡೀಯಾಗದ ಪೂರ್ಣಾಹುತಿ, ಗಜಾಶ್ವಪೂಜೆ, ಸಂಜೆ ವಿಜಯೋತ್ಸವ, ಶಮೀಪೂಜೆ, ಅ.24- ವಿಜಯದಶಮಿ, ಗಜಲಕ್ಷಿ ಅಲಂಕಾರ, ಲಕ್ಷ್ಮಿ ನಾರಾಯಣ ಹೃದಯಹೋಮ, ರಾಮಪಟ್ಟಾಭಿಷೇಕ ಸರ್ಗ ಪಾರಾಯಣಿ, ಅ.25-ಗಜಲಕ್ಷಿ ಅಲಂಕಾರ, ಶ್ರೀ ಶಾರದಾಂಬಾ ಮಹಾರಥೋತ್ಸವ, ಶ್ರೀ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ.
ಪಾರಾಯಣಗಳು
ನವರಾತ್ರಿ ಸಂದರ್ಭದಲ್ಲಿ ಶ್ರೀಮಠದಲ್ಲಿ ನಾಲ್ಕು ವೇದಗಳ ಪಾರಾಯಣ, ವಾಲ್ಮೀಕಿ ರಾಮಾಯಣ, ದೇವೀ ಭಾಗವತ, ದುರ್ಗಾಸಪ್ತಶತಿ, ವಾಲ್ಮೀಕಿ ರಾಮಾಯಣ, ಶ್ರೀ ಸೂಕ್ತ ಜಪ, ಭುವನೇಶ್ವರಿ ಜಪ, ಶ್ರೀ ಚಂದ್ರಮೌಳೀಶ್ವರ ಸ್ವಾಮಿಗೆ ಶತರುದ್ರಾಭಿಷೇಕ, ಶ್ರೀ ಚಕ್ರಕ್ಕೆ ನವಾಹರಣ ಪೂಜೆ, ಕುಮಾರೀ, ಸುವಾಸಿನೀ ಪೂಜೆ ನೆರವೇರುತ್ತದೆ.
ರಾಜಬೀದಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ನಡೆಯಲಿರುವ ರಥೋತ್ಸವ ಅತ್ಯಂತ ವೈಭವವಾಗಿ ನೆರವೇರುತ್ತದೆ. ದರ್ಬಾರು ನವರಾತ್ರಿಯ ವಿಶೇಷ ಕಾರ್ಯಕ್ರಮ ನಡೆಯಲಿದೆ. ಈ ದರ್ಬಾರು ಶ್ರೀ ವಿದ್ಯಾರಣ್ಯರ ಕಾಲದಿಂದಲೂ ನಡೆದು ಬಂದಿದೆ. ಜಗದ್ಗುರುಗಳು ಶ್ರೀಮಠದ ಸಂಪ್ರದಾಯಕ್ಕೆ ಅನುಸಾರವಾಗಿ ಕಿರೀಟ,ಆಭರಣಗಳನ್ನು ಧರಿಸಿ ಸ್ವರ್ಣ ಸಿಂಹಾಸನದಲ್ಲಿ ಅಸೀನರಾಗುತ್ತಾರೆ. ಸಂಜೆ 6 ಕ್ಕೆ ಶ್ರೀಮಠದ ಆವರಣದಲ್ಲಿ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.