Belagavi: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ; ಹಲವರ ವಿರುದ್ದ ದೂರು
ವೀಡಿಯೋ ವೈರಲ್: ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ
Team Udayavani, Oct 15, 2023, 6:00 AM IST
ಬೆಳಗಾವಿ: ಹನಿಟ್ರ್ಯಾಪ್ ಆರೋಪದಡಿ ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆ ಎಳೆ ತಂದು ಹಲ್ಲೆ ಮಾಡಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಘಟನೆ ಗೋಕಾಕ ತಾಲೂಕಿನ ಘಟಪ್ರಭಾದ ಮಲ್ಲಾಪುರ ಪಿ.ಜಿ.ಯಲ್ಲಿ ನಡೆ ದಿದೆ. ಈ ಕುರಿತ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ತರ ಕಾರಿ ವ್ಯಾಪಾ ರಿ ಯಾದ ಶ್ರೀದೇವಿ ಗೊಡಚಿ ಎಂಬವರ ಮನೆಗೆ ಸ್ಥಳೀಯ ಮಹಿಳೆಯರು ಮತ್ತು ಕೆಲವು ಪುರುಷರು ಶುಕ್ರವಾರ ರಾತ್ರಿ ಹೋಗಿ ನಿಂದಿಸಿ ಹಲ್ಲೆ ಮಾಡಿದ್ದಾರೆ. ಬಳಿಕ ಮೆರವಣಿಗೆ ಮೂಲಕ ಮೃತ್ಯುಂಜಯ ಸರ್ಕಲ್‌ಗೆ ಕರೆತಂದು ಚಪ್ಪಲಿ ಹಾಕಿ ಥಳಿಸಿದ್ದಾರೆ. ಬಳಿಕ ಘಟಪ್ರಭಾ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮಹಿಳೆಯ ಪತಿ ಲಕ್ಷ್ಮಣ ಆರೋಪಿಸಿದ್ದಾರೆ.
ಈಕೆ ಹನಿಟ್ರ್ಯಾಪ್ ಮಾಡುತ್ತಿದ್ದು, ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಘಟಪ್ರಭಾ ಪೊಲೀಸರು ಕೂಡಲೇ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ಘಟಪ್ರಭಾದ ಅರ್ಜುನ ಗಂಡವ್ವಗೋಳ, ಮಾರುತಿ ದೊಡ್ಡಮನಿ, ಉದಯ ಗಂಡವ್ವಗೋಳ, ಕೃಷ್ಣಾ ಗಂಡವ್ವಗೋಳ, ಸುಧೀರ ರಾಜು ಚಿಂಚಲಿ, ಲಕ್ಷ್ಮೀ ಹರಿಜನ, ಸಾವಕ್ಕಾ ಹರಿಜನ, ಕಮಲವ್ವ ಭಜಂತ್ರಿ, ಶೋಭಾ ಹರಿಜನ, ಶಾಲವ್ವ ಲಕ್ಷ್ಮಣ ದೊಡ್ಡಮನಿ, ಗೀತಾ ಲಕ್ಷ್ಮಣ ದೊಡ್ಡಮನಿ, ಶಿಂದಿಕುರಬೇಟ ಗ್ರಾಮದ ಮಾರ್ಕಂಡೇಯ ಮಹಿಮಗೋಳ ಹಾಗೂ ಇನ್ನೂ 10 ಜನರ ವಿರುದ್ಧ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.