![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 16, 2023, 12:38 PM IST
ಗದಗ: ಕೆಎಸ್ ಆರ್ ಟಿಸಿ ಬಸ್ ಹಾಗೂ ಟಾಟಾ ಸುಮೋ ವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿಕೊಪ್ಪ ಕ್ರಾಸ್ ಬಳಿ ಸೋಮವಾರ ನಡೆದಿದೆ.
ಕಲಬುರಗಿಯಿಂದ ಶಿರಹಟ್ಟಿ ಫಕ್ಕೀರೇಶ್ವರ ಮಠದ ದರ್ಶನಕ್ಕೆ ತೆರಳುತ್ತಿದ್ದ ಟಾಟಾ ಸುಮೋ ವಾಹನದ ಹಿಂಬದಿಯ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ ವಾಹನದಲ್ಲಿದ್ದ ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಅಫ್ಜಲಪುರದ ಸಚಿನ್ ಕತ್ತಿ (31), ಮಾದನ ಹಿಪ್ಪರಗಿಯ ಶಿವಕುಮಾರ್ ಕಲಶೆಟ್ಟಿ (50), ಚಂದ್ರಕಲಾ (42), ರಾಣಿ (32) ಹಾಗೂ ಅಪ್ಜಲಪೂರದ ದ್ರಾಕ್ಷಾಯಣಿ ಕತ್ತಿ (33) ಎಂದು ಪೊಲೀಸರು ತಿಳಿಸಿದ್ದಾರೆ.
ನರೇಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಂತೆ ಮೃತರ ವಿವರ ಲಭ್ಯವಾಗಿಲ್ಲ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.