![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 17, 2023, 4:10 PM IST
ಹುಕ್ಕೇರಿ: ಭಾರತೀಯ ಸಂಸ್ಕೃತಿಯಲ್ಲಿ ಹಬ್ಬ ಹರಿದಿನಗಳು ಎಲ್ಲರನ್ನು ಒಂದುಗೂಡಿಸಿ, ಅವರಲ್ಲಿ ಸಾಮರಸ್ಯದ ಬೆಸುಗೆ ಹಾಕಿ ನಮ್ಮ ದೇಶಿಯ ಸಂಸ್ಕೃತಿಯನ್ನ ಎತ್ತಿ ಹಿಡಿಯುವಲ್ಲಿ ಹಿರಿಯ ಪಾತ್ರ ವಹಿಸುತ್ತವೆ. ಹಾಗೆಯೇ ದಸರಾ ಉತ್ಸವ ನಮ್ಮಲ್ಲಿರುವ ಅಸುರೀ ಗುಣಗಳು ಹೋಗಿ ದೈವಿ ಗುಣಗಳು ಬರುವ ಹಾಗೆ ಮಾಡುವಂತಹ ಅಪರೂಪದ ಹಬ್ಬವಾಗಿದೆ.
ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ರಾಜ್ಯ, ಹೊರರಾಜ್ಯ, ಹೊರದೇಶದಿಂದಲೂ ಕೂಡಾ ಜನರನ್ನು ಕರೆಸುವ ಮುಖಾಂತರ ನಮ್ಮ ಜನರಿಗೆ ಪರಿಚಯಸುವ ಕೆಲಸ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಮಾಡುತ್ತಿದ್ದಾರೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನುಡಿದರು. ಹುಕ್ಕೇರಿ ಹಿರೇಮಠದ ದಸರಾ ಉತ್ಸವದ ಆಧ್ಯಾತ್ಮ ಪ್ರವಚನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .
ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ವಿರಕ್ತಮಠದ ಶಿವಬಸವ ಸ್ವಾಮಿಗಳು ಮಾತನಾಡಿ, ಜನರಿಗೆ ಹೊಸದೇನಾದರೂ ಕೊಡಬೇಕು. ನಮ್ಮ ಜನ ಎಲ್ಲವನ್ನು ನೋಡಬೇಕು ಎನ್ನುವ ಅಭಿಲಾಷೆಯಿಂದ ಸಾಕಷ್ಟು ಪರಿಶ್ರಮ ಪಟ್ಟು ಸ್ವಾಮೀಜಿಗಳು ವಿನೂತನ ಕಾರ್ಯಕ್ರಮ ಮಾಡುತ್ತಾ ಬಂದಿರುವುದು ನಮಗೆಲ್ಲ ಅಭಿಮಾನದ ಸಂಗತಿ ಎಂದರು.
.
ಆಧ್ಯಾತ್ಮ ಪ್ರವಚನ ನೀಡಿದ ಮಾತೋಶ್ರೀ ಪಾರ್ವತಿದೇವಿ ಮಾತನಾಡಿ, ಧ್ಯಾನ, ಭಜನೆ, ಸತ್ಸಂಗಗಳು ನಮ್ಮಲ್ಲಿರುವ ದುರ್ಗುಣಗಳನ್ನು ಹೊಡೆದೋಡಿಸುತ್ತವೆ. ಅದಕ್ಕಾಗಿ ನಾವು ನಿತ್ಯ ಪೂಜೆ, ಪಾರಾಯಣವನ್ನು ಮಾಡಬೇಕು ಎಂದರು.
ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಆರ್ ಕೆ ಹುಕ್ಕೇರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ರಾಮಣ್ಣ ಹುಕ್ಕೇರಿ ಮಾತನಾಡಿದರು. ಮಹಾವೀರ ಉದ್ಯೋಗ ಸಮೂಹ ಸಂಸ್ಥೆಯ ಅಧ್ಯಕ್ಷ ಮಹಾವೀರ ನಿಲಜಗಿ, ಮಹಾವೀರ ಭಾಗಿ, ಪರಗೌಡ ಪಾಟೀಲ ಉಪಸ್ಥಿತರಿದ್ದರು. ಸಿ ಎಂ ದರಬಾರೆ ನಿರೂಪಿಸಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.