Bill: ವಿಧೇಯಕ ಬಗ್ಗೆ ಅಮಿತ್ ಶಾ ಜತೆ ಚರ್ಚೆ: ಸಿಎಂ ಸಿದ್ದರಾಮಯ್ಯ
Team Udayavani, Oct 17, 2023, 9:43 PM IST
ಬೆಂಗಳೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಇತ್ತೀಚೆಗೆ ಮಂಡಿಸಿದ ಭಾರತೀಯ ನ್ಯಾಯ ಸಂಹಿತೆ- 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಮಸೂದೆ- 2023 ವಿಧೇಯಕ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆ ಚರ್ಚೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಎರಡು ವಿಧೇಯಕಗಳ ಬಗ್ಗೆ ಅಧ್ಯಯನ ಮಾಡಲು ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ವರದಿಯನ್ನು ಪರಿಶೀಲಿಸಿ, ಸರ್ಕಾರ ತನ್ನ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವರಿಗೆ ತಿಳಿಸಲಿದೆ. ತಾವು ಗೃಹ ಸಚಿವರನ್ನು ಭೇಟಿಯಾಗುವ ಸಂದರ್ಭದಲ್ಲಿಯೂ ಈ ವಿಷಯ ಕುರಿತು ಚರ್ಚಿಸುವುದಾಗಿ ತಿಳಿಸಿದರು.
ಪರಿಣತರ ಸಮಿತಿಯ ಸದಸ್ಯರು ತಮ್ಮ ಪರಿಶ್ರಮ, ಜ್ಞಾನ ಹಾಗೂ ಅನುಭವದ ಆಧಾರದಲ್ಲಿ ಈ ವರದಿಯನ್ನು ಸಿದ್ಧಪಡಿಸಿರುವ ಕುರಿತು ಮುಖ್ಯಮಂತ್ರಿಗಳು ಸಮಿತಿಯನ್ನು ಅಭಿನಂದಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಚಿವ ಎಚ್.ಕೆ ಪಾಟೀಲ್, ಸಮಿತಿಯು 10 ಸಭೆಗಳನ್ನು ನಡೆಸಿ, ಮೂರೂ ಮಸೂದೆಗಳ ಪ್ರತಿಯೊಂದು ಸೆಕ್ಷನ್ ಕುರಿತೂ ಸಹ ಸವಿವರವಾಗಿ ಅಧ್ಯಯನ ನಡೆಸಿ, ಚರ್ಚಿಸಿ, ವರದಿ ರೂಪಿಸಿದೆ ಎಂದು ತಿಳಿಸಿದರು.
ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಪಿ.ಎನ್.ದೇಸಾಯಿ, ಕಾನೂನು, ನ್ಯಾಯ ಮತ್ತು ಮಾನವಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಎಂ. ಹಿರೇಮಠ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆಯ ಕಾರ್ಯದರ್ಶಿ ಜಿ.ಶ್ರೀಧರ್ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ವಿಶೇಷ ಕಾರ್ಯದರ್ಶಿ ಹಾಗೂ ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ವ್ಯಾಜ್ಯಗಳ ನಿರ್ದೇಶಕ ಹೆಚ್.ಕೆ. ಜಗದೀಶ್, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಅಪರ ಕಾರ್ಯದರ್ಶಿ ಶೀಲಾ ಮೊದಲಾದವರು ಸಮಿತಿಯ ಸದಸ್ಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.