IMPS: ಐಎಂಪಿಎಸ್‌ನಲ್ಲಿ 5 ಲಕ್ಷ ಕಳುಹಿಸಿ
Team Udayavani, Oct 17, 2023, 11:27 PM IST
ಹೊಸದಿಲ್ಲಿ: ಶೀಘ್ರದಲ್ಲಿಯೇ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್‌ನಿಂದ ಮತ್ತೂಬ್ಬರಿಗೆ ಕ್ಷಣ ಮಾತ್ರದಲ್ಲಿ 5 ಲಕ್ಷ ರೂ. ವರೆಗೆ ವರ್ಗಾಯಿಸಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅದಕ್ಕಾಗಿ ಹಣ ಸ್ವೀಕರಿಸುವವರ ಹೆಸರು, ಖಾತೆ ಸಂಖ್ಯೆ, ಐಎಫ್ಎಸ್‌ಸಿ ಕೋಡ್ ಸೇರ್ಪಡೆ ಮಾಡುವ ಅಗತ್ಯವೇ ಇಲ್ಲ. ಈ ನಿಟ್ಟಿನಲ್ಲಿ ಇಮ್ಮಿಡಿಯೆಟ್ ಪೇಮೆಂಟ್ ಸರ್ವಿಸ್ (ಐಎಂಪಿಎಸ್) ನಿಯಮಗಳನ್ನು ಸರಳೀಕರಿಸುವ ಬಗ್ಗೆ ಭಾರತದ ರಾಷ್ಟ್ರೀಯ ಪಾವತಿ ನಿಗಮ ನಿಯಮಿತ (ಎನ್‌ಪಿಸಿಐ) ಚಿಂತನೆ ನಡೆಸುತ್ತಿದೆ.
ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಎನ್‌ಪಿಸಿಐ ಘೋಷಣೆ ಮಾಡಿತ್ತು. ಇಂಟರ್‌ನೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೇವಲ ಹಣವನ್ನು ಯಾರು ಸ್ವೀಕರಿಸುತ್ತಾರೆಯೋ ಅವರ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಹೆಸರನ್ನು ಟೈಪ್ ಮಾಡಿದರೆ ಸಾಕಾಗುತ್ತದೆ. ಕಾರ್ಪೊರೇಟ್ ಮತ್ತು ರಿಟೈಲ್ ಗ್ರಾಹಕರಿಗೆ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸುವುದರ ಬಗ್ಗೆ ಚರ್ಚೆಗಳು ನಡೆಸಿವೆ. ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಸಂಬಂಧಿಸಿದಂತೆ ಅದರ ನಿಯಮಗಳು ಬದಲಾಗುವ ಸಾಧ್ಯತೆಗಳು ಇವೆ. ಮೊಬೈಲ್ ಮೂಲಕ ಹಣ ಕಳುಹಿಸಲು ಮತ್ತು ಸ್ವೀಕರಿಸುವವರು ನಿಗದಿತ ಬ್ಯಾಂಕ್ ಖಾತೆಯ ಜತೆಗೆ ಮೊಬೈಲ್ ನಂಬರ್ ಲಿಂಕ್ ಮಾಡಿಕೊಂಡಿರಬೇಕಾಗುತ್ತದೆ.
ಅನುಕೂಲವೇನು ?
ಹೆಚ್ಚಿನ ಮೊತ್ತದ ಹಣ ವರ್ಗಾವಣೆ ಸುಲಭ. ಮೊಬೈಲ್ ಸಂಖ್ಯೆ, ಬ್ಯಾಂಕ್ ಹೆಸರು ಟೈಪ್ ಮಾಡಿದರೆ ಸಾಕು.
ಯಾವಾಗ ಜಾರಿ?
ಹೊಸ ವ್ಯವಸ್ಥೆ ಯಾವಾಗ ಜಾರಿಯಾಗಲಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಲಭ್ಯವಾಗಿಲ್ಲ. ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖರ ಪ್ರಕಾರ ಹೊಸ ವ್ಯವಸ್ಥೆ ಜಾರಿ ಹಲವು ಹಂತಗಳಲ್ಲಿ ಇದೆ.
2 ಖಾತೆಗೆ 1 ಮೊಬೈಲ್ ಸಂಖ್ಯೆ ಇದ್ದರೆ
ಬ್ಯಾಂಕ್‌ಗಳು ಖಾತೆದಾರರು ಹೊಂದಿರುವ ಯಾವ ಖಾತೆಗೆ ಹಣ ಸ್ವೀಕರಿಸುವಂತೆ ಮಾಡಬೇಕು ಎಂದು ಕೇಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.