![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 18, 2023, 8:37 PM IST
ಹುಣಸೂರು: ಕಾರು ಬೈಕ್ ಮುಖಾಮುಖಿ ಢಿಕ್ಕಿಯಾಗಿ ತೀವ್ರಗಾಯಗೊಂಡಿದ್ದ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಆರ್.ಟಿ.ಓ ಕಚೇರಿ ಬಳಿಯ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-275 ರ ಬೈಪಾಸ್‌ನಲ್ಲಿ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದ ಪುರ ನಿವಾಸಿ ಹಾಸಿಗೆ ದುರಸ್ತಿ ಮಾಡುವ ಅಬ್ದುಲ್ ಜಬ್ಬಾರ್(56) ಮೃತ ದುರ್ದೈವಿ.
ಅಬ್ದುಲ್ ಜಬ್ಬಾರ್ ತನ್ನ ಬೈಕಿನಲ್ಲಿ ಮೈಸೂರಿನಿಂದ ಹಾಸಿಗೆ ದುರಸ್ತಿಗಾಗಿ ಬಟ್ಟೆ ಖರೀದಿಸಿ ಸ್ವಗ್ರಾಮದತ್ತ ತೆರಳುತ್ತಿದ್ದ ವೇಳೆ ಪಿರಿಯಾಪಟ್ಟಣ ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದ ರಭಸಕ್ಕೆ ತೀವ್ರಗಾಯಗೊಂಡಿದ್ದರು. ದಾರಿ ಹೋಕರು ತತ್ ಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ ಸಾವನ್ನಪ್ಪಿದ್ದರು. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು-ಮಂಗಳೂರು ಹೆದ್ದಾರಿಯ ಆರ್.ಟಿ.ಓ.ಕಚೇರಿ ಎದುರಿನ ರಸ್ತೆ, ಅಯ್ಯಪ್ಪಸ್ವಾಮಿ ಬೆಟ್ಟದ ತಿರುವಿನಲ್ಲಿ ಪದೇಪದೇ ಅಪಘಾತಗಳು ಸಂಭವಿಸಿ ಪ್ರಾಣಹಾನಿಯಾಗುತ್ತಿದ್ದರೂ ಹೆದ್ದಾರಿ ನಿರ್ವಹಣೆ ಹೊತ್ತ ಇಂಜಿನಿಯರ್‌ಗಳು ರಸ್ತೆ ವಿಭಜಕ ಅಳವಡಿಸಲು ಮುಂದಾಗದೆ ಅಪಘಾತಗಳು ಸಂಭವಿಸುತ್ತಿದ್ದು, ಈ ಬಗ್ಗೆ ಕ್ರಮವಹಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.