Politics: ಡಿ.ಕೆ.ಶಿವಕುಮಾರ್-ಸತೀಶ್ ತಿಕ್ಕಾಟ: ವರಿಷ್ಠರಿಗೆ ಸಂಕಷ್ಟ
ಡಿಕೆಶಿ ಬಂದರೂ ದೂರ ಉಳಿದ ಬೆಳಗಾವಿ ನಾಯಕರು- ಸಹವಾಸವೇ ಬೇಡ ಎಂದು ತಟಸ್ಥವಾದ ಹೆಬ್ಟಾಳ್ಕರ್
Team Udayavani, Oct 18, 2023, 11:02 PM IST
ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆಯ ರಾಜಕಾರಣ ಮತ್ತೆ ಸುದ್ದಿ ಮಾಡುತ್ತಿದೆ. ಪ್ರಭಾವಿ ನಾಯಕರ ತೆರೆಮರೆಯ ರಾಜಕೀಯದಾಟ ಪಕ್ಷದ ವರಿಷ್ಠರಿಗೆ ಇಕ್ಕಟ್ಟಿನ ಪರಿಸ್ಥಿತಿ ತಂದಿಟ್ಟಿದೆ. ಇಂತಹ ಒಂದು ಪ್ರಯೋಗ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜಿಲ್ಲೆಯ ಭೇಟಿಯ ಸಂದರ್ಭದಲ್ಲೂ ನಡೆಯಿತು.
ಸಾಮಾನ್ಯವಾಗಿ ಒಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಜಿಲ್ಲೆಗೆ ಭೇಟಿ ಮಾಡಲು ಬರುತ್ತಾರೆ ಎಂದರೆ ಪಕ್ಷದ ಅಲ್ಲಿನ ಶಾಸಕರು, ಜಿಲ್ಲೆಯ ಸಚಿವರು ಹಾಗೂ ಹಿರಿಯ ನಾಯಕರು ಇರಲೇಬೇಕು. ಸಚಿವರು ಇರದಿದ್ದರೂ ಶಾಸಕರ ಉಪಸ್ಥಿತಿ ಬಹಳ ಮುಖ್ಯ. ಆದರೆ ಬುಧವಾರ ಡಿ.ಕೆ.ಶಿವಕುಮಾರ್ ಜಿಲ್ಲೆಗೆ ಭೇಟಿ ನೀಡಿದ್ದಾಗ ಪಕ್ಷದ ಬಹುತೇಕ ಶಾಸಕರು ಬಾರದಿರುವುದು ಹಲವು ಚರ್ಚೆಗಳಿಗೆ ಎಡೆಮಾಡಿಕೊಟ್ಟಿತು.
ಜಿಲ್ಲೆಯಲ್ಲಿ ತಮ್ಮ ಪ್ರಭಾವ ಮತ್ತು ಹಿಡಿತವನ್ನು ಕಡಿಮೆ ಮಾಡಬೇಕು. ಕಾರ್ಯಕರ್ತರು ತಮ್ಮಿಂದ ದೂರವಾಗಬೇಕು ಎಂಬ ಲೆಕ್ಕಾಚಾರದಿಂದ ಡಿ.ಕೆ.ಶಿವಕುಮಾರ್ ಬಣ ಬೇರೆ ನಾಯಕರನ್ನು, ಅದರಲ್ಲೂ ಬೇರೆ ಪಕ್ಷದಿಂದ ಬಂದಿರುವ ನಾಯಕರನ್ನು ಬೆಳೆಸಲು ಪ್ರಯತ್ನಿಸುತ್ತಿರುವುದು ಇಷ್ಟೆಲ್ಲ ಸಮಸ್ಯೆ ಮತ್ತು ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಮುಖ್ಯವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅನುಪಸ್ಥಿತಿ ಬಹಳವಾಗಿ ಎದ್ದು ಕಂಡಿತು. ಇದಕ್ಕೆ ಪೂರಕವಾಗಿ ಜಾರಕಿಹೊಳಿ ಜತೆ ಗುರುತಿಸಿಕೊಂಡಿರುವ ಕೆಲವು ಶಾಸಕರ ಗೈರು ಕೂಡ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಅನುಮಾನಗಳಿಗೆ ಮತ್ತಷ್ಟು ಆಹಾರ ಒದಗಿಸಿತು.
ಸತೀಶ್ ರಾಜಕೀಯದಾಟ
ಡಿ.ಕೆ.ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ನಡುವಿನ ರಾಜಕೀಯ ಮನಸ್ತಾಪ ಹೊಸದೇನಲ್ಲ. ಮೂರ್‍ನಾಲ್ಕು ವರ್ಷಗಳಿಂದ ಇದು ಮುಂದುವರಿದಿದೆ. ಜಾರಕಿಹೊಳಿ ತಮಗಿರುವ ಅಸಮಾಧಾನವನ್ನು ಎಂದಿಗೂ ನೇರವಾಗಿ ಹೇಳಿಲ್ಲ. ಆದರೆ ತಮ್ಮದೇ ಆದ ರಾಜಕೀಯ ಆಟಗಳಿಂದ ಇದಕ್ಕೆ ಉತ್ತರ ನೀಡಿದ್ದಾರೆ.
ಜಿಲ್ಲೆಯ ರಾಜಕಾರಣ ಮತ್ತು ಅಧಿಕಾರಿಗಳ ವರ್ಗಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ವಿಚಾರ ಸತೀಶ್ ಜಾರಕಿಹೊಳಿ ಮುನಿಸಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಹೀಗಾಗಿ ತಮಗೆ ಆಗಿರುವ ಬೇಸರವನ್ನು ಈಗ ಗೈರಾಗುವ ಮೂಲಕ ತೋರಿಸಿದ್ದಾರೆ. ಅವರ ಬೆಂಬಲಿಗರೂ ಇದೇ ದಾರಿಯಲ್ಲಿ ಸಾಗಿದ್ದಾರೆ ಎಂಬುದು ಪಕ್ಷದ ಮೂಲಗಳ ಹೇಳಿಕೆ.
ಹೆಬ್ಟಾಳ್ಕರ್ ಕೂಡ ಗೈರು
ಇನ್ನೊಂದು ಕಡೆ ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದ ಸಂದರ್ಭದಲ್ಲಿ ತಾನು ಉಪಮುಖ್ಯಮಂತ್ರಿಗಳ ಜತೆ ಸಭೆ ನಡೆಸುವುದು ಬೇರೆ ಅರ್ಥಕ್ಕೆ ಎಡೆ ಮಾಡಿಕೊಡುತ್ತದೆ ಎಂಬ ಕಾರಣದಿಂದ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಕೂಡ ಉಪ ಮುಖ್ಯಮಂತ್ರಿಗಳ ಕಾರ್ಯಕ್ರಮದಿಂದ ದೂರ ಉಳಿದಿದ್ದರು.
ಇವೆಲ್ಲದರ ಮಧ್ಯೆ ಇಬ್ಬರು ಪ್ರಮುಖ ನಾಯಕರ ನಡುವಿನ ಮನಸ್ತಾಪ, ವೈಯಕ್ತಿಕ ಸಂಘರ್ಷ ಪಕ್ಷದ ಕಾರ್ಯಕರ್ತರನ್ನು ಬಹಳ ಸಂಕಷ್ಟಕ್ಕೆ ಗುರಿ ಮಾಡಿದೆ. ಯಾರ ಪರ ಹೋದರೂ ಮುಂದೆ ಕಷ್ಟ ಎಂಬ ಗೊಂದಲ ಮುಖಂಡರು ಮತ್ತು ಕಾರ್ಯಕರ್ತರನ್ನು ಕಾಡುತ್ತಿದೆ.
ಸತೀಶ್ ಜತೆಗೆ ಮುನಿಸಿಲ್ಲ: ಡಿಕೆಶಿ
ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ನನ್ನ ಮಧ್ಯೆ ಯಾವುದೇ ಮುನಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಅವರು ನನ್ನನ್ನು ಭೇಟಿ ಮಾಡಿದ್ದರು. ಶಾಸಕರ ಜತೆ ಪ್ರವಾಸ ಹೋಗುವ ಕುರಿತು ನನ್ನೊಂದಿಗೆ ಚರ್ಚಿಸಿಲ್ಲ. ಭೇಟಿಯಾದಾಗಲೂ ಪ್ರವಾಸದ ಕುರಿತು ಮಾತನಾಡಿಲ್ಲ. 136 ಶಾಸಕರೆಲ್ಲರೂ ನಮ್ಮವರೇ. ಬಿಜೆಪಿಯವರಿಗೆ ಏನಾದರೂ ಒಂದು ಸುದ್ದಿ ಬೇಕು ಅಂತ ಇಂಥದ್ದನ್ನೆಲ್ಲ ಸೃಷ್ಟಿಸುತ್ತಿದ್ದಾರೆ. ಸತೀಶ ಜಾರಕಿಹೊಳಿ ಬೆಂಗಳೂರಿನಲ್ಲಿದ್ದಾರೆ. ಲಕ್ಷ್ಮೀ ಖಾಸಗಿ ಕಾರ್ಯಕ್ರಮ ನಿಮಿತ್ತ ಭದ್ರಾವತಿಯಲ್ಲಿದ್ದಾರೆ. ನಾನು ಬೆಳಗಾವಿಗೆ ಭೇಟಿ ನೀಡಿದ್ದುದು ಪೂರ್ವನಿಯೋಜಿತವಲ್ಲ. ಮಂಗಳವಾರ ರಾತ್ರಿಯೇ ಬೆಳಗಾವಿಗೆ ಬರಲು ನಿರ್ಧರಿಸಿದ್ದೇನೆ. ಹೀಗಾಗಿ ನಾನು ಬರುವುದರ ಬಗ್ಗೆ ಯಾರಿಗೂ ಮಾಹಿತಿ ಕೊಟ್ಟಿಲ್ಲ. ಶಾಸಕರು, ಸಚಿವರು ಗೈರಾಗಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಬೆಳಗಾವಿಯಿಂದಲೇ ಬಂಡಾಯ ಆರಂಭ ಶುರುವಾಗುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆ ನಿರಾಧಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.