Teacher: ಅ. 21: ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸೆಲಿಂಗ್
Team Udayavani, Oct 18, 2023, 11:12 PM IST
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 13,552 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದು ಅ. 21 (ಶನಿವಾರ) ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ನಡೆಸಲಿದೆ.
ಮಾ. 8ರಂದು ಪ್ರಕಟಿಸಲಾಗಿರುವ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸೆಲಿಂಗ್ಗೆ ಅರ್ಹ ಅಭ್ಯರ್ಥಿಗಳ ವಿವರವನ್ನು ಅ.19 (ಗುರುವಾರ)ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ. ಪಟ್ಟಿಯಲ್ಲಿರುವ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಶನಿವಾರ ಬೆಳಗ್ಗೆ 10.30ಕ್ಕೆ ಆಯಾ ಜಿಲ್ಲೆಗಳ ನೇಮಕಾತಿ ಪ್ರಾಧಿಕಾರಿಯಾದ ಜಿಲ್ಲಾ ಉಪ ನಿರ್ದೇಶಕರು (ಆಡಳಿತ) ಕಚೇರಿಯಲ್ಲಿ ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ನಲ್ಲಿರುವ ಎಲ್ಲ ಅಗತ್ಯ ವಿವರಗಳನ್ನು ಪಡೆದು ಸಕಾಲದಲ್ಲಿ ಕೌನ್ಸೆಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟ ಅಗತ್ಯ ದಾಖಲೆಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಉಪನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.