Tragedy: ಪತ್ನಿಯ ಆತ್ಮಹತ್ಯೆ ಸುದ್ದಿ ಕೇಳುತ್ತಿದ್ದಂತೆ ತಲೆಗೆ ಗುಂಡು ಹಾರಿಸಿಕೊಂಡ ಯೋಧ
ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು...
Team Udayavani, Oct 19, 2023, 10:29 AM IST
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಗಡಿ ಭದ್ರತಾ ಪಡೆಯ ಯೋಧನೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬುಧವಾರ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಿಯೋಜಿಸಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೆಡ್ ಕಾನ್‌ಸ್ಟೆಬಲ್ ರಾಜೇಂದ್ರ ಯಾದವ್ (28) ಆತ್ಮಹತ್ಯೆಗೆ ಶರಣಾದ ಯೋಧ.
ಘಟನೆ ವಿವರ:
ಯೋಧ ರಾಜೇಂದ್ರ ಯಾದವ್ ಕಳೆದ ಎಂಟು ತಿಂಗಳ ಹಿಂದೆಯಷ್ಟೇ ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ಧೀರ್‌ಪುರ ಗ್ರಾಮದ ನಿವಾಸಿ ಅಂಶು ಯಾದವ್ ಅವರನ್ನು ಮದುವೆಯಾಗಿದ್ದರು. ಮದುವೆಯಾದ ಕೆಲವೇ ದಿನಗಳಲ್ಲಿ ಇಬ್ಬರ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಜಗಳವಾಗುತ್ತಿತ್ತು ಎನ್ನಲಾಗಿದೆ.
ಈ ನಡುವೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಜೇಂದ್ರ ಯಾದವ್ ದಿನ ಪತ್ನಿ ಜೊತೆ ಕರೆ ಮಾಡಿ ಮಾತನಾಡುತ್ತಿದ್ದ ಆದರೆ ಬುಧವಾರ ಕರೆ ಮಾಡಿದ ಸಂದರ್ಭ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿದೆ ಇದು ಗಂಭೀರ ಸ್ಥಿತಿಗೆ ತಲುಪಿತ್ತು ಎನ್ನಲಾಗಿದೆ ಜಗಳದಿಂದ ಮುನಿಸಿಕೊಂಡ ಪತ್ನಿ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಪತಿಗೆ ಪತ್ನಿ ಸಿಟ್ಟಲ್ಲಿ ಈ ರೀತಿ ಮಾಡುತ್ತಾಳೆ ಎಂಬ ಆಲೋಚನೆ ಇದ್ದಿರಲಿಕ್ಕಿಲ್ಲ ಸ್ವಲ್ಪ ಸಮಯದ ಬಳಿಕ ರಾಜೇಂದ್ರ ಯಾದವ್ ಮೊಬೈಲ್ ಗೆ ಕರೆಯೊಂದು ಬಂದಿದ್ದು ಈ ಕರೆಯಲ್ಲಿ ರಾಜೇಂದ್ರ ಯಾದವ್ ಪತ್ನಿ ಅಂಶು ಯಾದವ್ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ. ಪತ್ನಿಯ ಸಾವಿನ ಸುದ್ದಿ ಕೇಳುತ್ತಲೇ ಆಘಾತಕ್ಕೆ ಒಳಗಾದ ಯೋಧ ತನ್ನ ಬಳಿ ಇದ್ದ ಸರ್ವಿಸ್ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಅತ್ತ ರಾಜಸ್ತಾನದಲ್ಲಿ ಅಂಶು ಯಾದವ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ದೇಹವನ್ನು ಹಸ್ತಾಂತರಿಸಿದ್ದು ಇತ್ತ ರಾಜೇಂದ್ರ ಯಾದವ್ ಅವರ ಪಾರ್ಥಿವ ಶರೀರವನ್ನು ಗುರುವಾರ ಜೈಪುರಕ್ಕೆ ತರುವ ಸಾಧ್ಯತೆ ಇದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇದನ್ನೂ ಓದಿ: Ramanagara: ಮನೆಯಲ್ಲೇ ನೇಣು ಬಿಗಿದುಕೊಂಡ ಮಹಿಳೆ… ಪೊಲೀಸರಿಂದ ಪ್ರಿಯಕರನ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.