Dowry: ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ; ಪ್ರಕರಣ ದಾಖಲು
Team Udayavani, Oct 20, 2023, 1:07 AM IST
ಕೋಟ: ಗಂಡ ಮತ್ತು ಆತನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿ ಮಾನಸಿಕ ಹಿಂಸೆ ನೀಡಿದ್ದಾರೆ ಹಾಗೂ ಚಿನ್ನಾಭರಣ ಸಹಿತ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ ಎಂದು ಸುಳ್ಳು ಆರೋಪ ಮಾಡಿ ಮಾನಹಾನಿ ಮಾಡಿದ್ದಾರೆ ಎಂದು ಬನ್ನಾಡಿ ಕಂಬಳಗದ್ದೆಮನೆ ನಿವಾಸಿ ಸ್ಫೂ ರ್ತಿ ಶೆಟ್ಟಿ ಅವರು ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇವರಿಗೆ ಕುಂದಾಪುರ ತಾಲೂಕಿನ ಉಳ್ಳೂರು- 74ನೇ ನಿವಾಸಿ ಸಂಕೇತ್ ಶೆಟ್ಟಿ ಅವರೊಂದಿಗೆ 2023 ಮೇ 21ರಂದು ವಿವಾಹವಾಗಿದ್ದು, ವಿವಾಹದ ಸಂದರ್ಭ ಗಂಡನ ಮನೆಯವರು 15 ಲಕ್ಷ ರೂ. ವರದಕ್ಷಿಣಿಗೆ ಬೇಡಿಕೆ ಇಟ್ಟಿದ್ದಾರೆ ಹಾಗೂ ಮದುವೆ ದಿನ 5 ಲಕ್ಷ ರೂ. ವರದಕ್ಷಿಣೆ ಪಡೆದಿದ್ದಾರೆ. ಆದರೆ ಮದುವೆಯ ಅನಂತರ ಸಂಕೇತ್ಗೆ ಆರೋಗ್ಯದ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ.
ಅನಂತರ ಸ್ಫೂರ್ತಿಯವರಿಗೆ ಗಂಡ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದು, ಮಾವ ಸಂಜೀವ ಶೆಟ್ಟಿ ಮತ್ತು ಅತ್ತೆ ವನಿತಾ ಶೆಡ್ತಿ ಜತೆಯಾಗಿ ಹೆಚ್ಚಿನ ವರದಕ್ಷಿಣೆಗೂ ಬೇಡಿಕೆ ಸಲ್ಲಿಸಿ ತವರು ಮನೆಗೆ ಬಿಟ್ಟು ಹೋಗಿದ್ದಾರೆ. ಅನಂತರ ಗಂಡ ಹಾಗೂ ಅವರ ಮನೆಯವರು ಸ್ಫೂರ್ತಿಗೆ ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದು, ಮದುವೆ ಸಂದರ್ಭ ಹಾಕಿದ ಚಿನ್ನಾಭರಣ ಸಹಿತ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ನೀಡಿದ್ದಾರೆ ಎಂದು ಸ್ಫೂರ್ತಿ ಉಡುಪಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.