Bahrain: ಪ್ಯಾಲೆಸ್ತೀನ್ ವಿರುದ್ಧ ಪೋಸ್ಟ್: ಭಾರತೀಯ ಮೂಲದ ವೈದ್ಯನ ವಜಾ
Team Udayavani, Oct 20, 2023, 10:54 PM IST
ಮನಾಮಾ: ಪ್ಯಾಲೆಸ್ತೀನ್ ವಿರುದ್ಧ ಪೋಸ್ಟ್‌ಗಳನ್ನು ಹಾಕಿದ ಪರಿಣಾಮ ಬಹರೇನ್‌ನಲ್ಲಿರುವ ರಾಯಲ್ ಬಹರೇನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ವೈದ್ಯರೊಬ್ಬರನ್ನು ಕೆಲಸದಿಂದ ತೆಗೆದುಹಾಕಲಾಗಿದೆ.
ಗಾಜಾಪಟ್ಟಿಯಲ್ಲಿ ಪ್ಯಾಲೆಸ್ತೀನ್ ಉಗ್ರ ಸಂಘಟನೆ ಮತ್ತು ಇಸ್ರೇಲ್ ಸೇನೆ ನಡುವೆ ಯುದ್ಧ ನಡೆಯುತ್ತಿದೆ. ಇಸ್ರೇಲ್ ಬೆಂಬಲಿಸಿ ಭಾರತೀಯ ಮೂಲದ ಡಾ. ಸುನೀಲ್ ರಾವ್ ಸರಣಿ ಟ್ವೀಟ್‌ಗಳನ್ನು ಮಾಡಿದ್ದರು. ಈ ಟ್ವೀಟ್‌ಗಳ ಬಗ್ಗೆ ಟ್ವಿಟರ್ ಬಳಕೆದಾರರೊಬ್ಬರು ಬಹರೇನಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು.
“ನಮ್ಮ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಸುನೀಲ್ ರಾವ್ ಅವರು ಸಾಮಾಜಿಕ ಜಾಲತಾಣದಲ್ಲಿ ನಮ್ಮ ಸಮಾಜಕ್ಕೆ ಆಕ್ರಮಣಕಾರಿ ಎಂಬಂತಹ ಪೋಸ್ಟ್‌ಗಳನ್ನು ಮಾಡಿರುವುದು ಗಮನಕ್ಕೆ ಬಂದಿದೆ. ಅವರು ಟ್ವೀಟ್‌ಗಳು ವೈಯಕ್ತಿಕವಾದದ್ದು. ಅದಕ್ಕೂ ಆಸ್ಪತ್ರೆಗೂ ಸಂಬಂಧವಿಲ್ಲ. ಆಸ್ಪತ್ರೆಯ ನಿಯಮಗಳನ್ನು ಉಲ್ಲಂ ಸಿದ ಕಾರಣಕ್ಕಾಗಿ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ’ ಎಂದು ರಾಯಲ್ ಬಹರೇನ್ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.