Polali Rajarajeshwari Temple: 9 ಸಾವಿರ ಹರಕೆ ಸೀರೆಗಳ ಹಂಚಿಕೆ
Team Udayavani, Oct 20, 2023, 11:16 PM IST
ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಲಲಿತಾ ಪಂಚಮಿಯ ದಿನವಾದ ಗುರುವಾರ ರಾತ್ರಿ ದೇವಸ್ಥಾನಕ್ಕೆ ಹರಕೆ ರೂಪದಲ್ಲಿ ಸಂದಾಯವಾದ ಸೀರೆಗಳನ್ನು ಹಂಚಲಾಗಿದ್ದು, ಸುಮಾರು 9 ಸಾವಿರ ಸೀರೆಗಳನ್ನು 18 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರಸಾದ ರೂಪದಲ್ಲಿ ಪಡೆದುಕೊಂಡರು.
ಸೀರೆಯು ತಾಯಿಯ ಪ್ರಸಾದವೆಂದು ಭಕ್ತರು ತಾಸುಗಟ್ಟಲೆ ಕಾದು ಕುಳಿತು ಸ್ವೀಕರಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ| ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರರಾದ ಯು. ತಾರಾನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ಪವಿತ್ರಪಾಣಿ ಮಾಧವ ಭಟ್, ಅರ್ಚಕರಾದ ಕೆ. ರಾಮ ಭಟ್, ನಾರಾಯಣ ಭಟ್, ಪರಮೇಶ್ವರ್ ಭಟ್, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಅವರು ಸೀರೆ ವಿತರಿಸಿದರು.
ಪೊಳಲಿ ಕ್ಷೇತ್ರದಲ್ಲಿ ನವರಾತ್ರಿ ಹಿನ್ನೆಲೆಯಲ್ಲಿ ಪ್ರತೀದಿನ ಬೆಳಗ್ಗೆ ಭಕ್ತರ ಹರಕೆಯ ಚಂಡಿಕಾ ಹೋಮ ನಡೆಯುತ್ತಿದ್ದು, ರಾತ್ರಿ ನವರಾತ್ರಿ ಪೂಜೆ ನಡೆಯುತ್ತದೆ. ಗುರುವಾರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ದಾಸ ಕೀರ್ತನೆ, ಭಕ್ತಿ ಗಾಯನ, ದೇವರ ನಾಮ ಸಂಕೀರ್ತನೆ, ವಿದ್ವಾನ್ ಗಣರಾಜ ಭಟ್ ಬಂಟ್ವಾಳ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.