Anganwadi ಇರುವ ಸಿಬಂದಿಗೆ ಕಾರ್ಯದೊತ್ತಡ, ಯೋಜನೆಗಳ ಅನುಷ್ಠಾನಕ್ಕೆ ತೊಡಕು
ಅಂಗನವಾಡಿ ಸಿಬಂದಿ ಹುದ್ದೆ ಖಾಲಿ
Team Udayavani, Oct 20, 2023, 11:23 PM IST
ಕೋಟ: ರಾಜ್ಯದ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಾಗಿರುವ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆ ಭರ್ತಿಯಾಗದೆ ಹಲವು ತಿಂಗಳು ಕಳೆದಿವೆ. ನೇಮಕಾತಿಗೆ ಆನ್‌ಲೈನ್ ವಿಧಾನವನ್ನು ಪರಿಚಯಿಸುತ್ತಿರುವುದರಿಂದ ಪ್ರಕ್ರಿಯೆ ತಡವಾಗಲು ಕಾರಣ ಎನ್ನಲಾಗುತ್ತಿದೆ. ಸರಕಾರದ ಯೋಜನೆಗಳ ಅನುಷ್ಠಾನ, ಅಂಗನವಾಡಿ ನಿರ್ವಹಣೆ ಮುಂತಾದ ಕಾರ್ಯಗಳಿಗೆ ಇದರಿಂದ ಕಷ್ಟವಾಗುತ್ತಿದೆ.
ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಯೋಜನೆಗಳ ಅನುಷ್ಠಾನ, ಗೃಹಲಕ್ಷ್ಮಿ ಯೋಜನೆಯಲ್ಲಿನ ಸಮಸ್ಯೆಗಳನ್ನು ಪತ್ತೆಹಚ್ಚಿ ಪರಿಹರಿಸುವುದು ಹಾಗೂ ಅಂಗನವಾಡಿಯ ನಿರ್ವಹಣೆ, ಮಕ್ಕಳಿಗೆ ಅಕ್ಷರಾಭ್ಯಾಸ ಹೀಗೆ ಸಾಕಷ್ಟು ಕರ್ತವ್ಯಗಳಿ ರುವುದರಿಂದ ಅಂಗ® ವಾಡಿಯಲ್ಲಿ ಇಬ್ಬರು ಸಿಬಂದಿ ಇದ್ದರೂ ಮುಗಿಯದಷ್ಟು ಕೆಲಸವಿದೆ. ಸಿಬಂದಿ ಕೊರತೆ ಇರು ವಲ್ಲಿ ಮತ್ತಷ್ಟು ಸಮಸ್ಯೆಯಾಗುತ್ತಿದೆ.
ದಾಖಲಾತಿ ಮೇಲೂ ಪರಿಣಾಮ
ಸಿಬಂದಿ ಕೊರತೆ ಯಿಂದ ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ತೊಡಕಾಗುತ್ತದೆ ಎನ್ನುವ ಕಾರಣಕ್ಕೆ ಸರಕಾರಿ ವ್ಯವಸ್ಥೆಯ ಬಗ್ಗೆ ಒಲವಿರುವ ಹೆತ್ತವರೂ ಮಕ್ಕಳನ್ನು ಖಾಸಗಿ ಸಂಸ್ಥೆಗೆ ದಾಖಲಿಸುವ ಸಾಧ್ಯತೆ ಇರುತ್ತದೆ. ಇದರಿಂದ ಅಂಗನವಾಡಿಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎನ್ನುವ ಆತಂಕವನ್ನು ಗ್ರಾಮಸಭೆ, ಕೆಡಿಪಿ ಸಭೆಗಳಲ್ಲಿ ಜನಪ್ರತಿನಿಧಿಗಳು, ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.
ಅಂಗನವಾಡಿ ಸಿಬಂದಿ ಹುದ್ದೆ ಖಾಲಿ ಇರುವುದು ಗಮನದಲ್ಲಿದೆ. ಆನ್‌ಲೈನ್ ಮೂಲಕ ನೇಮಕಾತಿ ನಡೆಯುವುದರಿಂದ ಸ್ವಲ್ಪ ವಿಳಂಬವಾಗಿದೆ. ಸರಕಾರ ಶೀಘ್ರದಲ್ಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ.
– ಶ್ಯಾಮಲಾ ಸಿ.ಕೆ. / ಕುಮಾರ್,
ಉಪನಿರ್ದೇಶಕರು, ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ಉಡುಪಿ/ದ.ಕ.
-ರಾಜೇಶ್ ಗಾಣಿಗ ಅಚ್ಲಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.