Bangalore: ನಶೆಯಲ್ಲಿ ನಡುರಸ್ತೆಯಲ್ಲೇ ಯುವತಿಯರ ರಂಪಾಟ
Team Udayavani, Oct 21, 2023, 1:15 PM IST
ಬೆಂಗಳೂರು: ಕೋರಮಂಗಲದ ಡ್ರಂಕನ್ ಡ್ಯಾಡಿ ಪಬ್ ಮುಂದೆ ಪಾನಮತ್ತ ಯುವತಿಯರಿಬ್ಬರು ಸಾರ್ವಜನಿಕರೊಂದಿಗೆ ಜಗಳಕ್ಕಿಳಿದು ಹೈಡ್ರಾಮ ಮಾಡಿರುವ ಆರೋಪ ಕೇಳಿ ಬಂದಿದ್ದು, ಪೊಲೀಸರು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ.
ಗುರುವಾರ ತಡರಾತ್ರಿ ಕೋರಮಂಗಲದ ಡ್ರಂಕನ್ ಡ್ಯಾಡಿ ಪಬ್ ಬಳಿ ಇಬ್ಬರು ಯುವತಿಯರು ಹಾಗೂ ಯುವಕರು ಮದ್ಯದ ಅಮಲಿನಲ್ಲಿ ತೇಲುತ್ತಿದ್ದರು. ರಸ್ತೆಯಲ್ಲಿ ಬರುತ್ತಿದ್ದ ಕಾರಿನ ಮೇಲೆ ಕುಳಿತುಕೊಂಡು ಜೋರಾಗಿ ಕಿರುಚಾಡಿ ಅಸಭ್ಯವಾಗಿ ವರ್ತನೆ ತೋರಿದ್ದರು. ನಶೆಯಲ್ಲಿ ತೇಲುತ್ತಾ ಇವರ ಪುಂಡಾಟ ನೋಡಲು ಹತ್ತಾರು ಮಂದಿ ರಸ್ತೆ ಮಧ್ಯೆ ನಿಂತುಕೊಂಡ ಪರಿಣಾಮ ಕೆಲ ಹೊತ್ತಿನವರೆಗೆ ರಸ್ತೆಯಲ್ಲಿ ಸಂಚಾರ ದಟ್ಟಣೆಯೂ ಉಂಟಾಯಿತು. ಒಬ್ಬ ಯುವತಿ ಕಾರಿನ ಮೇಲೆ ಏರಿ ಕೂಳಿತುಕೊಂಡು ಕೂಗಾಡಿದರೆ, ಮತ್ತೂಬ್ಬಳು, ಮದ್ಯದ ಅಮಲಿನಲ್ಲಿ ಸರಿಯಾಗಿ ನಿಲ್ಲಲು ಸಾಧ್ಯವಾಗದೇ ರಸ್ತೆಯಲ್ಲೇ ಅಡ್ಡಾದಿಡ್ಡಿ ಹೊರಳಾಡಿದ್ದಾಳೆ.
ಸಾಲದಕ್ಕೆ ರಸ್ತೆಯಲ್ಲಿ ತಿರುಗಾಡುತ್ತಿದ್ದ ಸಾರ್ವಜನಿಕರೊಂದಿಗೆ ಸುಖಾ ಸುಮ್ಮನೆ ಜಗಳ ಮಾಡಲು ಆರಂಭಿಸಿದ್ದರು. ಆ ವೇಳೆ ಸ್ಥಳೀಯರು ಕೋರಮಂಗಲ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹೋಗಿ ಪುಂಡಾಟ ಮಾಡುತ್ತಿದ್ದವರನ್ನ ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಯುವತಿಯರು ನಶೆಯಲ್ಲಿ ತೇಲುತ್ತಿರುವುದನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಮದ್ಯಪಾನ ಮಾಡುವುದು ತಪ್ಪಲ್ಲ. ಆದರೆ, ನಡು ರಸ್ತೆಯಲ್ಲಿ ಯುವತಿಯರ ನಶೆಯ ತೇಲಾಟವು ಸಾರ್ವಜನಿಕರಿಗೆ ಕಿರಿ-ಕಿರಿಯಾಗಬಾರದು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.