Banhatti ದಸರೆಗೆ ರಂಗು ತಂದಿರುವ ಬೊಂಬೆಗಳ ಪ್ರದರ್ಶನ

ಉತ್ತರ ಕರ್ನಾಟಕದಲ್ಲೂ ಮೈಸೂರು ದಸರೆಯ ವೈಭವ ಸಾರುವ ಬೊಂಬೆ ಪ್ರದರ್ಶನ

Team Udayavani, Oct 21, 2023, 6:49 PM IST

Banhatti ದಸರೆಗೆ ರಂಗು ತಂದಿರುವ ಬೊಂಬೆಗಳ ಪ್ರದರ್ಶನ

ರಬಕವಿ ಬನಹಟ್ಟಿ: ದಸರಾ ಎಂದು ಕೂಡಲೇ ಪ್ರಮುಖವಾಗಿ ನೆನಪಿಗೆ ಬರುವುದು ಜಂಬೂ ಸವಾರಿ ಹಾಗೂ ಕುಸ್ತಿಗಳು. ಅದೇ ರೀತಿ ಮನೆಯಲ್ಲಿ ಗಟ್ಟ ಕಟ್ಟಿ ಬೊಂಬೆಗಳ ಪ್ರದರ್ಶನ ಮಾಡುವುದು. ಇದು ಮೈಸೂರು ಭಾಗಕ್ಕೆ ಮಾತ್ರ ಸೀಮಿತವಾಗಿದ್ದ ಬೊಂಬೆ ಪ್ರದರ್ಶನ ಈಗ ಉತ್ತರ ಕರ್ನಾಟಕದ ಬಹುತೇಕ ಕಡೆ ಬೊಂಬೆ ಪ್ರದರ್ಶನ ನಡೆಯುತ್ತಿದ್ದು, ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಮೋಹನ ಮಹಾದೇವಪ್ಪ ಪತ್ತಾರ ಕುಟುಂಬದವರು ಸುಮಾರು 42 ವರ್ಷಗಳಿಂದ ದಸರಾ ಹಬ್ಬದಲ್ಲಿ ಬೊಂಬೆ ಪ್ರದರ್ಶನ ಮಾಡುತ್ತಾ ಬಂದಿದ್ದಾರೆ. ಇದೀಗ ಅವರ ಮನೆಯಲ್ಲಿ ದಸರೆಯ ನಿಮಿತ್ತ ಗೊಂಬೆಗಳ ಪ್ರದರ್ಶನ ಈ ಭಾಗದಲ್ಲಿ ದಸರೆಯ ವೈಭವವನ್ನು ಸಾರುತ್ತಿದೆ.

ಗೊಂಬೆಗಳ ಉತ್ಸವವು ತಮ್ಮ ಪರಿಕಲ್ಪನೆ, ಆಸಕ್ತಿಗೆ ಅನುಗುಣವಾಗಿ ವಿವಿಧ ಮಾದರಿಯ ಗೊಂಬೆಗಳನ್ನು ಸಂಗ್ರಹಿಸಿ, ಅವುಗಳನ್ನು ಮನೆಯ ಸ್ಥಳಾವಕಾಶವನ್ನು ನೋಡಿಕೊಂಡು ಜೋಡಿಸಿ ಬೆಳಕು ಮತ್ತಿತರೆಗಳಿಂದ ಶೃಂಗಾರಿಸಿ ಪ್ರದರ್ಶನಕ್ಕಿಡುತ್ತಾರೆ.

ದಸರಾ ಹಬ್ಬದ ನಿಮಿತ್ತವಾಗಿ ಬನಹಟ್ಟಿಯ ಪತ್ತಾರ ಕುಟುಂಬದವರು ತಮ್ಮ ಮನೆಯಲ್ಲಿ ಸುಂದರವಾಗಿ ಗೊಂಬೆಗಳ ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ. ವೈವಿಧ್ಯಮಯವಾದ ಗೊಂಬೆಗಳು, ಮೈಸೂರ ದಸರಾ ಮೆರವಣಿಗೆಯ ಆನೆಗಳು, ಸೇರಿದಂತೆ ಹತ್ತಾರು ಗೊಂಬೆಗಳನ್ನು ಇಟ್ಟಿದ್ದು, ಇವುಗಳಿಗೆ ಲೈಟಿಂಗ್ ಮಾಡಿ ಮತ್ತಷ್ಟು ಗಮನ ಸೆಳೆಯುವಂತೆ ಮಾಡಿದ್ದಾರೆ. ಸದ್ಯ ಬೊಂಬೆಗಳ ಸಂಖ್ಯೆ 200ಕ್ಕೂ ಹೆಚ್ಚು ಇದ್ದು, ಪ್ರತಿ ವರ್ಷ 4 ರಿಂದ 5 ಬೊಂಬೆಗಳನ್ನು ಹೆಚ್ಚು ಹೆಚ್ಚು ಮಾಡುತ್ತಾ ಬರುತ್ತಿದ್ದಾರೆ.

ಮನೆಯ ಸದಸ್ಯರಾದ ಗೀತಾ, ಕಲಾ, ಶ್ರುತಿ, ಸ್ನೇಹಾ ಹಾಗೂ ಮಕ್ಕಳು ಈ ಗೊಂಬೆಗಳನ್ನು ಅಚ್ಚುಕಟ್ಟಾಗಿ ಇಡಲು ಸಾಕಷ್ಟು ಪರಿಶ್ರಮ ವಹಿಸಿರುತ್ತಾರೆ. ಈ ಬಾರಿಯ ಪ್ರದರ್ಶನದಲ್ಲಿ ನವದುರ್ಗೆಯರು, ವಿಷ್ಣುವಿನ ಅವತಾರ, ಕೃಷ್ಣನ ದಶಾವತಾರ, ನಾಟ್ಯ ಗಣಪತಿ, ಮದುವೆ ಮಂಟಪ, ಕೃಷ್ಣನ ರಾಸಲೀಲೆಗಳು, ಚೆನ್ನಪಟ್ಟಣದ ಬೊಂಬೆಗಳು, ಪಟ್ಟದ ಬೊಂಬೆಗಳು, ಮೈಸೂರು ಅರಮನೆ ಜಂಬು ಸವಾರಿ, ತೋಪುಗಳು, ಕಾಮದೇನು ಆಕಳು, ರಾಜಸ್ಥಾನದ ಬೊಂಬೆಗಳು ಸೇರಿದಂತೆ ಅನೇಕ ಪ್ರಕಾರದ ಬೊಂಬೆಗಳನ್ನು ಅಚ್ಚುಕಟ್ಟಾಗಿ ಜೋಡಿಸಿರುವುದು ನೋಡುಗರನ್ನು ಆಕರ್ಷಿಸಿದೆ.

ಯಾರು ಹಿಂದಿನಿಂದಲೂ ಈ ಸಂಪ್ರದಾಯವನ್ನು ಆಚರಿಸುತ್ತಾ ಬಂದಿದ್ದಾರೋ, ಅಂತಹವರ ಮನೆಯಲ್ಲಿ ಈ ಗೊಂಬೆ ಕೂಡಿಸುವುದನ್ನು ಈಗಲೂ ನೋಡಬಹುದು. ನಮ್ಮ ದೇಶದ ಪೌರಾಣಿಕ ಹಿನ್ನೆಲೆ, ಕಲೆ, ಸಂಪ್ರದಾಯ, ಜನ ಜೀವನವನ್ನು ದಸರಾ ಬೊಂಬೆಗಳು ಸಾರುತ್ತವೆ.

ಮನೆಗಳಲ್ಲಿ ಗೊಂಬೆ ಕೂರಿಸುವಾಗ ಸ್ಥಳಾವಕಾಶ ನೋಡಿಕೊಂಡು 3,5,7,9 ಹಂತಗಳಲ್ಲಿ ಕೂರಿಸುತ್ತಾರೆ. ಹೆಚ್ಚು ಗೊಂಬೆಗಳು ಹಾಗೂ ಸ್ಥಳಾವಕಾಶ ಇದ್ದವರು 9 ಹಂತಗಳಲ್ಲಿ ಕೂರಿಸಿದರೆ, ಇನ್ನು ಕೆಲವರು 7 ಹಂತಗಳಲ್ಲಿ, ಕೆಲವರು 5 ಹಂತಗಳಲ್ಲಿ ಕೂರಿಸುತ್ತಾರೆ. ಮೊದಲ ಅಂತಸ್ತಿನಲ್ಲಿ ಪಟ್ಟದ ಬೊಂಬೆ, ಕಲಶ, ಗಣಪತಿ, ಮನೆ ದೇವರು, ದೀಪಗಳು ಇವುಗಳನ್ನಿಟ್ಟು, ಎರಡು, ಮೂರು ಉಳಿದ ಅಂತಸ್ತುಗಳಲ್ಲಿ ಇತರ ಬೊಂಬೆಗಳನ್ನು ಜೋಡಿಸುತ್ತಾರೆ.

ಗೊಂಬೆ ಕೂರಿಸುವವರು ಪ್ರತೀ ವರ್ಷ ಹಳೆಯ ಗೊಂಬೆಯ ಜೊತೆಗೆ ಒಂದು ಜೋಡಿ ಹೊಸ ಗೊಂಬೆಯನ್ನು ಸೇರಿಸಿ ಗೊಂಬೆ ಕೂರಿಸಬೇಕು ಎನ್ನುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ವಾಡಿಕೆಯಾಗಿದ್ದು, ಹಾಗಾಗಿ ಪ್ರತಿಯೊಬ್ಬರು ಹಳೆ ಗೊಂಬೆ ಜೊತೆಗೆ ಹೊಸ ಗೊಂಬೆಯನ್ನು ಕೂಡ್ರಿಸುತ್ತಾರೆ. ಇತ್ತೀಚೆಗೆ ಹಳೆ ಸಂಪ್ರದಾಯದ ಬೊಂಬೆಗಳ ಜೊತೆ ಆಧುನಿಕ ಸ್ಪರ್ಶ ನೀಡಲಾಗುತ್ತಿದೆ. ಮರದ, ಮಣ್ಣಿನ ಗೊಂಬೆ ಜೊತೆಗೆ ಆಧುನಿಕ ಬೊಂಬೆಗಳನ್ನು ಪ್ರದರ್ಶನದಲ್ಲಿ ಬಳಸುತ್ತಿದ್ದಾರೆ. ಒಟ್ಟಾರೆ ಇಂತಹ ಪ್ರದರ್ಶನಗಳು ನಮ್ಮ ಪರಂಪರೆ, ಸಂಪ್ರದಾಯವನ್ನು ಉಳಿಸಿ ಬೆಳೆಸಿಕೊಂಡು ಹೋಗುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ನಮ್ಮ ಮನೆಯಲ್ಲಿ ಸುಮಾರು 40 ವರ್ಷಗಳಿಂದ ದಸರಾ ಸಂದರ್ಭದಲ್ಲಿ ಬೊಂಬೆಗಳನ್ನು ಕೂಡ್ರಿಸುವ ಸಂಪ್ರದಾಯವಿದ್ದು, ಕಳೆದ 20 ವರ್ಷದಿಂದ ಹೊಸ ಮನೆಯಲ್ಲಿ ಜಾಗ ಹೆಚ್ಚಳವಾಗಿದ್ದರಿಂದ ಅದನ್ನು ಅಚ್ಚು ಕಟ್ಟಾಗಿ 7 ಹಂತದಲ್ಲಿ ಜೋಡಿಸಿ ಪ್ರದರ್ಶನ ಮಾಡುತ್ತೇವೆ. ನಮ್ಮ ಪರಂಪರೆ ಸಂಸ್ಕೃತಿ ಉಳಿದು ಬೆಳೆಯಲಿ ಎಂಬುದು ನಮ್ಮ ಆಶಯ. ಪ್ರದರ್ಶನ ನೋಡಲು ನಮ್ಮ ಆಪ್ತರು, ಸಂಬಂಧಿಕರು ಬಂದು ನೋಡಿ ಖುಷಿ ಪಡುತ್ತಾರೆ.
– ಕಲಾ ರವಿ ಪತ್ತಾರ, ಬನಹಟ್ಟಿ

ನಮ್ಮ ಪರಂಪರೆ ಸಂಸ್ಖೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಸಂಪ್ರದಾಯಗಳು ಅವಶ್ಯವಾಗಿವೆ. ದಸರೆಯ ವೈಭವವನ್ನು ಇಲ್ಲಿ ಪ್ರತಿಷ್ಠಾಪಿಸಿರುವುದು ಸಂತಸದ ವಿಷಯ. ಇದು ನೋಡುಗರನ್ನು ಆಕರ್ಷಿಸುತ್ತಿದೆ. ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ಪತ್ತಾರ ಕುಟುಂಬದ ಕಾರ್ಯ ನಿಜಕ್ಕೂ ಶ್ಲಾಘನೀಯ
– ಸಿದ್ದು ಕ. ಸವದಿ ಶಾಸಕರು ತೇರದಾಳ ಮತಕ್ಷೇತ್ರ

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.