Sea Bird ನೌಕಾನೆಲೆ: 2013ರ ಭೂಸ್ವಾಧೀನ ಕಾಯ್ದೆಯಂತೆ ಪರಿಹಾರ?


Team Udayavani, Oct 21, 2023, 10:26 PM IST

sea bird karwar

ಬೆಂಗಳೂರು: ಕಾರವಾರದಲ್ಲಿ ನೌಕಾನೆಲೆ ವಿಸ್ತರಿಸಿ, ಸಿವಿಲ್‌ ಎನ್‌ಕ್ಲೇವ್‌ ನಿರ್ಮಿಸುವ ಸೀಬರ್ಡ್‌ ನೌಕಾನೆಲೆಯ 2ನೇ ಹಂತದ ಕಾಮಗಾರಿಗೆ 2013ರ ಭೂಸ್ವಾಧೀನ ಕಾಯ್ದೆಯನ್ವಯ ಪರಿಹಾರ ನೀಡುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಏಷ್ಯಾದಲ್ಲಿ ಅತಿ ದೊಡ್ಡ ನೌಕಾನೆಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಾರವಾರದ ಐಎನ್‌ಎಸ್‌ ಕದಂಬ ನೌಕಾನೆಲೆಯನ್ನು ವಿಸ್ತರಿಸಿ, ಸಿವಿಲ್‌ ಎನ್‌ಕ್ಲೇವ್‌ ನಿರ್ಮಿಸುವ 2ನೇ ಹಂತದ ಕಾಮಗಾರಿಯನ್ನು ಸೀಬರ್ಡ್‌ ನೌಕಾನೆಲೆ ಕೈಗೊಂಡಿದೆ. ವಿಮಾನ ನಿಲ್ದಾಣಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ನೀಡಿಕೆಯಲ್ಲಿ ತಾರತಮ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ ಶನಿವಾರ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಭೆ ನಡೆಸಿದರು.

ಪರಿಹಾರ ನಿಗದಿಯಲ್ಲಿ ತಾರತಮ್ಯ ಆಗಿದೆ. ಭೂಮಿಗೆ ತಕ್ಕಷ್ಟು ಪರಿಹಾರ ನಿಗದಿಯಾಗಿಲ್ಲ. ಇದರಿಂದ ಗ್ರಾಮದಲ್ಲಿನ ರೈತರಿಗೆ ಅನ್ಯಾಯ ಆಗುತ್ತಿದೆ. ಈ ಬಗ್ಗೆ ಗಮನ ಹರಿಸಬೇಕು ಎಂದು ಜನಪ್ರತಿನಿಧಿಗಳು ಮನವರಿಕೆ ಮಾಡಿಕೊಟ್ಟರು. ತಾರತಮ್ಯವಿರುವುದನ್ನು ಗಮನಿಸಿದ ಸಿಎಂ, 2013 ರ ಭೂಸ್ವಾಧೀನ ಕಾಯ್ದೆಯನ್ವಯ ಇದನ್ನು ನಿವಾರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮೂರು ಗ್ರಾಮಗಳ ನಿರಾಶ್ರಿತ ಕುಟುಂಬಗಳು ಮಾಡಿಕೊಂಡ ಮನವಿಗೆ ಸ್ಪಂದಿಸಿದ ಸಿಎಂ, ವೈಜ್ಞಾನಿಕವಾಗಿ ಹಾಗೂ ನಿಯಮಬದ್ಧವಾಗಿ ಪರಿಹಾರ ಕೊಡುವ ದಿಕ್ಕಿನಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯ ಕಾರ್ಯದರ್ಶಿಗಳು ಮತ್ತು ಸಂಬಂಧಿಸಿದ ಇತರ ಹಿರಿಯ ಅಧಿಕಾರಿಗಳೊಂದಿಗೆ ಭೂಸ್ವಾಧೀನ ಪರಿಹಾರ ನಿಗದಿ, ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ಕುರಿತು ಹಾಗೂ ಸೂಕ್ತ ನಿವೇಶನ ನೀಡುವ ಕುರಿತಂತೆ ಸಭೆ ನಡೆಸಿ ಚರ್ಚಿಸುವಂತೆ ಮೂಲಸೌಕರ್ಯ ಆಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಅವರಿಗೆ ನಿರ್ದೇಶನ ನೀಡಿದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್‌ ಸೈಲ್‌, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ, ಸಿಎಂ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫ‌ರ್‌, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನೌಕಾನೆಲೆಯು ಎರಡನೇ ಹಂತದಲ್ಲಿ ವಿಸ್ತರಣೆಗೊಳ್ಳುತ್ತಿದೆ. ಯೋಜನೆಗಾಗಿ ಭೂಮಿ ಕೊಟ್ಟವರಿಗೆ ಸೂಕ್ತ ಪರಿಹಾರ ಸಿಗಬೇಕು. ಜತೆಗೆ ಸೀಬರ್ಡ್‌ ಮೊದಲ ಹಂತದ ಯೋಜನೆ ಅಡಿ ಭೂಮಿ ಕಳೆದುಕೊಂಡವರ ಕುಟುಂಬದವರಿಗೂ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು.
ಸಿದ್ದರಾಮಯ್ಯ, ಮುಖ್ಯಮಂತ್ರಿ

 

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.