Adani: ಸಂಸದೆ ಮಹುವಾಗೆ ಡಬಲ್ ಸಂಕಟ
Team Udayavani, Oct 21, 2023, 10:43 PM IST
ಕೋಲ್ಕತಾ/ಹೊಸದಿಲ್ಲಿ: ಅದಾನಿ ಗ್ರೂಪ್ ವಿರುದ್ಧ ಸಂಸತ್ ಪ್ರಶ್ನೆ ಕೇಳಲು ಲಂಚ ಪಡೆದುಕೊಂಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಲೋಕಪಾಲ ತನಿಖೆ ಆಗಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಒತ್ತಾಯಿಸಿದ್ದಾರೆ. ಒಟ್ಟು 2 ಕೋಟಿ ರೂ. ಲಂಚವನ್ನೂ ಪಡೆದುಕೊಂಡಿದ್ದಾರೆ ಎಂದೂ ದೂರಿದ್ದಾರೆ.
ಈ ಬಗ್ಗೆ ಅವರು ಲೋಕಪಾಲಕ್ಕೆ ಪತ್ರವನ್ನೂ ಬರೆದು ಒತ್ತಾಯಿಸಿದ್ದಾರೆ. ಸುಪ್ರೀಂಕೋರ್ಟ್ ವಕೀಲ ಜೈ ಅನಂತ್ ದೇಹಾದ್ರಾಯ್ ಅವರಿಗೆ ಸಂಸದೆ ಮೊಯಿತ್ರಾ ಪರ ವಕೀಲರು ಸಂಧಾನಕ್ಕಾಗಿ ಬಂದಿದ್ದರು ಎಂಬ ಬಗ್ಗೆ ಬರೆದಿರುವ ಪತ್ರ ತಮ್ಮ ಬಳಿ ಇದೆ ಎಂದೂ ದುಬೆ ಪತ್ರದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸಂಸತ್‌ನಲ್ಲಿ ಪ್ರಶ್ನೆ ಕೇಳುವ ನಿಟ್ಟಿನಲ್ಲಿ ಉದ್ಯಮಿ ದರ್ಶನ್ ಹೀರಾನಂದಾನಿ ಆವರಿಂದ ಲಂಚ ಪಡೆದುಕೊಂಡಿದ್ದಾರೆ ಸೇರಿದಂತೆ ಹಲವು ದಾಖಲೆಗಳು ತನ್ನ ಬಳಿ ಇವೆ. ಹೀಗಾಗಿ, ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ದೂರ ಸರಿದ ಟಿಎಂಸಿ: ಪ್ರಶ್ನೆ ಕೇಳಲು ಲಂಚ ಪ್ರಕರಣ ಶನಿವಾರ ಹೊಸ ಮಜಲನ್ನು ಪ್ರವೇಶಿಸುತ್ತಲೇ ಸಂಸದೆ ಮಹುವಾ ಮೊಯಿತ್ರಾ ಅವರ ವಿವಾದದಿಂದ ದೂರ ಸರಿಯಲು ತೃಣಮೂಲ ಕಾಂಗ್ರೆಸ್ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಪಕ್ಷ ಹೇಳುವುದೇನೂ ಇಲ್ಲ. ವಿವಾದಕ್ಕೆ ಒಳಗಾದವರೇ ಈ ಬಗ್ಗೆ ಮಾತನಾಡವುದು ಸೂಕ್ತ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.