![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 22, 2023, 10:08 AM IST
ಪುಣೆ: ಶನಿವಾರ ಪುಣೆ ಜಿಲ್ಲೆಯ ಗೊಜುಬಾವಿ ಗ್ರಾಮದ ಬಳಿ ತರಬೇತಿ ಅವಧಿಯಲ್ಲಿ ವಿಮಾನವೊಂದು ಪತನಗೊಂಡಿದೆ ಎಂದು ಪುಣೆ ಗ್ರಾಮಾಂತರ ಕಚೇರಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೈಲಟ್ ಮತ್ತು ತರಬೇತುದಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA) ಪ್ರಕಾರ, ರೆಡ್ ಬರ್ಡ್ ಅಕಾಡೆಮಿ ಟೆಕ್ನಾಮ್ ವಿಮಾನವು ಬಾರಾಮತಿ ಏರ್‌ಫೀಲ್ಡ್ ಬಳಿ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಮತ್ತು ತರಬೇತುದಾರರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಡಿಜಿಸಿಎ ತಿಳಿಸಿದೆ.
ಈ ಹಿಂದೆಯೂ ನಡೆದಿತ್ತು:
ಕಳೆದ ಗುರುವಾರ ಪುಣೆಯಲ್ಲಿ ಇದೇ ರೀತಿಯ ಇನ್ನೊಂದು ಘಟನೆ ನಡೆದಿದ್ದು ಇಬ್ಬರು ಜನರಿದ್ದ ತರಬೇತಿ ವಿಮಾನ ಪತನಗೊಂಡಿತ್ತು ಎಂದು ಹೇಳಲಾಗಿದೆ. ವಿಮಾನವು ಫ್ಲೈಟ್ ಟ್ರೇನಿಂಗ್ ಅಕಾಡೆಮಿ ನಡೆಸುತ್ತಿರುವ ತರಬೇತಿಯ ಭಾಗವಾಗಿತ್ತು ಮತ್ತು ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಯ ಬಾರಾಮತಿ ತಾಲೂಕಿನ ಕಟ್ಫಾಲ್ ಗ್ರಾಮದ ಬಳಿ ಪತನಗೊಂಡಿತ್ತು ಇದರಲ್ಲಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Israel-Hamas War: ಹಮಾಸ್ ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ…
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.