Patna ಕುಟುಂಬಕ್ಕೆ ಸಮಯ ನೀಡುತ್ತಿಲ್ಲ ಎಂಬ ಕಾರಣಕ್ಕೆ ಪತ್ನಿಯ ಕೊಲೆ!
Team Udayavani, Oct 22, 2023, 8:24 PM IST
ಪಾಟ್ನಾ: ಕುಟುಂಬಕ್ಕೆ ಸರಿಯಾಗಿ ಸಮಯ ನೀಡುತ್ತಿಲ್ಲ ಎಂಬ ಕಾರಣಕ್ಕೆ ಹೊಸದಾಗಿ ನೇಮಕವಾದ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ ಅನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಶೋಭಾ ಕುಮಾರಿ(23) ಮೃತ ಮಹಿಳೆಯಾಗಿದ್ದು, ಈಕೆಯ ಪತಿ ಆರೋಪಿ ಗಜೇಂದ್ರ ಯಾದವ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಗಜೇಂದ್ರ ಜೆಹನಾಬಾದ್ನಲ್ಲಿ ಕೋಚಿಂಗ್ ಸೆಂಟರ್ ನಡೆಸುತ್ತಿದ್ದಾನೆ. ಕೆಲವು ವರ್ಷಗಳ ಹಿಂದೆ ಕೋಚಿಂಗ್ ಸೆಂಟರ್ನಲ್ಲಿ ಪರಿಚಯವಾದ ಶೋಭಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಚಿಕ್ಕ ವಯಸ್ಸಿನ ಒಬ್ಬ ಪುತ್ರಿಯಿದ್ದಾಳೆ.
ಪೊಲೀಸ್ ಕಾನ್ಸ್ಟೆಬಲ್ ಆಗಿ ಹೊಸ ಉದ್ಯೋಗಕ್ಕೆ ಸೇರಿದ ನಂತರ ಪತ್ನಿ ತನಗೆ ಹಾಗೂ ಕುಟುಂಬಕ್ಕೆ ಸರಿಯಾಗಿ ಸಮಯ ನೀಡುತ್ತಿಲ್ಲ ಎಂದು ಗಜೇಂದ್ರ ಪದೇ ಪದೆ ಜಗಳ ತೆಗೆಯುತ್ತಿದ್ದ. ಶುಕ್ರವಾರ ಪಾಟ್ನಾಗೆ ಬಂದ ಗಜೇಂದ್ರ, ಹೋಟೆಲ್ ರೂಮ್ ಬುಕ್ ಮಾಡಿದ್ದಾನೆ. ಅಲ್ಲಿಗೆ ಪತ್ನಿಯನ್ನು ಕರೆಸಿದ್ದಾನೆ. ಪುನಃ ಇಬ್ಬರಿಗೂ ಜಗಳ ನಡೆದು, ಹತ್ತಿರದಿಂದ ಶೋಭಾ ಹಣೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಇದಕ್ಕೂ ಮುನ್ನ ಆಕೆಗೆ ಹಿಂಸೆ ನೀಡಿರುವುದು ಮೃತದೇಹದ ಮೇಲೆ ಆದ ಗುರುತುಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.