Cauvery Issue: ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡಲಿ: ನಟ ಶಿವರಾಜ್‌ಕುಮಾರ್
Team Udayavani, Oct 22, 2023, 10:48 PM IST
ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಎರಡು ರಾಜ್ಯಗಳ ನಾಯಕರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಬಹುದು ಎಂದು ನಟ ಶಿವರಾಜ್‌ಕುಮಾರ್ ಹೇಳಿದರು.
ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ನಾವು ಒತ್ತಡ ತರಬೇಕು. ಯಾವ ರೀತಿ ತರಬೇಕು ಎನ್ನುವುದನ್ನು ಎಲ್ಲರೂ ತೀರ್ಮಾನ ಮಾಡಬೇಕು ಎಂದರು.
ಕರ್ನಾಟಕ ಹಾಗೂ ತಮಿಳುನಾಡು ಎರಡು ಸರ್ಕಾರಗಳ ನಾಯಕರು ಕುಳಿತು ಮಾತನಾಡಬೇಕು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯೆ ಪ್ರವೇಶ ಮಾಡಿ ಮಾತುಕತೆ ನಡೆಸಬೇಕು. ಆಗ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.
ಖಂಡಿತವಾಗಿಯೂ ನಾವು ರೈತರ ಜೊತೆ ಇರುತ್ತೇವೆ. ನಮ್ಮ ಹೋರಾಟ ದೊಡ್ಡದಾಗಿರಬೇಕು. ಬರೀ ಪ್ರತಿಮೆಗಳಿಗೆ ಬೆಂಕಿ ಹಚ್ಚುವುದಲ್ಲ. ನಮಗೆ ಕಿಚ್ಚು ಇರುತ್ತೆ. ಆದರೆ ತಾಳ್ಮೆಯಿಂದ ಹೋರಾಟ ಮಾಡಬೇಕು. ನಾನು ಒಬ್ಬ ಕಲಾವಿದ. ದೊಡ್ಡವರು ಸಹ ಕುಳಿತು ರೈತರ ಸಮಸ್ಯೆಗೆ ಪರಿಹಾರ ಹುಡುಕಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.