BJP State President ಶೋಭಾ ಕರಂದ್ಲಾಜೆ ರಾಜ್ಯಾಧ್ಯಕ್ಷೆ?

ಬಿಜೆಪಿ ವಿಧಾನಸಭೆ, ಪರಿಷತ್‌ ವಿಪಕ್ಷ ನಾಯಕರ ಹೆಸರೂ ಶೀಘ್ರ ಅಂತಿಮ ಸಾಧ್ಯತೆ

Team Udayavani, Oct 23, 2023, 7:10 AM IST

shBJP State President ಶೋಭಾ ಕರಂದ್ಲಾಜೆ ರಾಜ್ಯಾಧ್ಯಕ್ಷೆ?

ಬೆಂಗಳೂರು: ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ಸುದ್ದಿಯ ನಡುವೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಕೂಡ ಚರ್ಚೆಯ ಮುನ್ನೆಲೆಗೆ ಬಂದಿದ್ದು, ಇದರ ಬೆನ್ನಲ್ಲೇ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ವಿಪಕ್ಷ ನಾಯಕರ ಆಯ್ಕೆಯೂ ಅಂತಿಮಗೊಳ್ಳುವ ಸಾಧ್ಯತೆ ಇದೆ.

ಹಾಲಿ ಅಧ್ಯಕ್ಷ ನಳಿನ್‌ ಅಧಿಕಾರಾವಧಿ ಅಂತ್ಯಗೊಂಡು ಬಹಳ ದಿನಗಳಾಗಿವೆ. ಹೊಸ ರಾಜ್ಯಾಧ್ಯಕ್ಷರ ನೇಮಕ ಆಗಬೇಕಿತ್ತು. ರಾಜ್ಯ ವಿಧಾನಸಭಾ ಚುನಾವಣ ಫ‌ಲಿತಾಂಶವು ವ್ಯತಿರಿಕ್ತವಾಗಿ ಬಂದಿರುವುದರಿಂದ ಕರ್ನಾಟಕ ಬಿಜೆಪಿಯಲ್ಲಿ ಎಲ್ಲ ಪ್ರಕ್ರಿಯೆಗಳೂ ಸ್ಥಗಿತ ಗೊಂಡಂತಾಗಿದೆ.

ಈ ಎಲ್ಲ ಪ್ರಕ್ರಿಯೆಗಳಿಗೂ ದಸರಾ ಅನಂತರ ಚಾಲನೆ ಸಿಗಲಿದೆ ಎಂದು ಬಿಜೆಪಿಯ ಒಂದು ತಂಡ ವಿಶ್ವಾಸದಲ್ಲಿದ್ದರೆ, ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೆ ಏನೂ ನಡೆಯುವುದಿಲ್ಲ ಎಂದು ರಾಜ್ಯ ಬಿಜೆಪಿಯ ಮತ್ತೊಂದು ತಂಡ ಅನುಮಾನ ವ್ಯಕ್ತಪಡಿಸಿದೆ.

ನಾವಿಕನಿಲ್ಲದ ಹಡಗಿನಂತಾಗಿರುವ ಬಿಜೆಪಿ ಯಲ್ಲಿ ಹೊಸ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರವೀಗ ಮತ್ತೂಮ್ಮೆ ಸಂಚಲನ ಮೂಡಿಸಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದಂತಾಗಿದೆ.

ಸಿ.ಟಿ. ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿಯಿಂದ ಬಿಡುಗಡೆ ಮಾಡಿದ ಕೂಡಲೇ ಅವರೇ ಬಿಜೆಪಿ ರಾಜ್ಯಾಧ್ಯಕ್ಷರು ಎನ್ನುವಂತೆ ಬಿಂಬಿಸಲಾಗಿತ್ತು. ಅರವಿಂದ ಲಿಂಬಾವಳಿ ಹೆಸರನ್ನೂ ತೇಲಿ ಬಿಡಲಾಗಿತ್ತು. ಈಗ ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಗೆ ಬಂದಿದೆ.

ಜಾತಿ ಸಂಯೋಜನೆ ಸೂತ್ರ
ಪ್ರಸ್ತುತ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್‌ ಕುಮಾರ್‌ ಕಟೀಲು ಬಂಟ ಸಮುದಾಯಕ್ಕೆ ಸೇರಿದವರು. ಇನ್ನೊಂದೆಡೆ ಲಿಂಗಾಯತ ಸಮುದಾಯದ ಬಿ.ಎಸ್‌. ಯಡಿಯೂರಪ್ಪ ಅವರು ವಿಪಕ್ಷ ನಾಯಕ ಹಾಗೂ ಸಿಎಂ ಸ್ಥಾನಗಳಲ್ಲಿ ಇದ್ದುದರಿಂದ ಎರಡು ಪ್ರಮುಖ ಸಮುದಾಯಗಳಿಗೂ ನ್ಯಾಯ ಸಂದಿತ್ತು. ಇದೇ ಜಾತಿ ಸಂಯೋಜನೆಯ ಸೂತ್ರವನ್ನು ಲೋಕಸಭೆ ಚುನಾವಣೆಗೆ ಮುನ್ನ ಹೆಣೆಯಬೇಕು ಎಂಬುದು ಬಿಜೆಪಿಯ ಚಿಂತನೆ. ಒಕ್ಕಲಿಗ ಅಥವಾ ಲಿಂಗಾಯತರು ರಾಜ್ಯಾಧ್ಯಕ್ಷರಾದರೆ, ವಿಧಾನಸಭೆ ವಿಪಕ್ಷ ನಾಯಕ ನಾಯಕ ಸ್ಥಾನದಲ್ಲಿ ಲಿಂಗಾಯತ ಅಥವಾ ಒಕ್ಕಲಿಗ ನಾಯಕರು ಇರಬೇಕು. ಆಗ ಮಾತ್ರ ಪಕ್ಷವನ್ನು ಮುನ್ನಡೆಸಿಕೊಂಡುವ ಹೋಗುವುದು ಸುಲಭವಾಗಲಿದೆ ಎಂಬ ಲೆಕ್ಕಾಚಾರಗಳು ನಡೆದಿವೆ.

ಶೋಭಾ ಹೆಸರೇ ಏಕೆ?
ವಿಧಾನಸಭೆ ಚುನಾವಣೆಯಲ್ಲಿ ಗುಂಪುಗಾರಿಕೆ ಹೆಚ್ಚಾದ್ದರಿಂದ ವರಿಷ್ಠರಿಗೆ ರಾಜ್ಯದ ತಳ ಹಂತ ದಿಂದ ಸರಿಯಾದ ಮಾಹಿತಿಗಳು ತಲುಪು ತ್ತಿರಲಿಲ್ಲ. ರಾಜ್ಯ ಹಾಗೂ ಹೊಸದಿಲ್ಲಿ ನಡುವೆ ಸಂವಹನದ ಕೊರತೆ ಆಗಿತ್ತು. ಸಂಘಟನೆ ಕುಸಿದಿತ್ತು. ಮಹಿಳೆಯನ್ನು ಈ ಹುದ್ದೆಗೆ ನೇಮಿಸಿದರೆ, ಗುಂಪುಗಾರಿಕೆಗೆ ಅವಕಾಶ ಇರುವುದಿಲ್ಲ. ಎಲ್ಲರೂ ಸಹಕರಿಸುತ್ತಾರೆ ಎಂಬ ವಿಶ್ವಾಸ ವರಿಷ್ಠರಲ್ಲಿದೆ. ಲೋಕಸಭೆ ಚುನಾವಣೆಗೆ ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ಛಾತಿ ಶೋಭಾ ಅವರಲ್ಲಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಶೋಭಾ ಕರಂದ್ಲಾಜೆ ಉತ್ತರ ಪ್ರದೇಶ ಚುನಾ ವಣೆಯಲ್ಲಿ ತೋರಿದ ಕ್ರಿಯಾಶೀಲತೆಯು ವರಿಷ್ಠರ ಮೆಚ್ಚುಗೆಗೆ ಪಾತ್ರವಾಗಿದೆ. ಶೋಭಾ ಅವರಿಗೆ ರಾಜ್ಯಾಧ್ಯಕ್ಷೆ ಪಟ್ಟ ಕೊಟ್ಟರೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಡಿ.ವಿ. ಸದಾನಂದ ಗೌಡರನ್ನು ಮತ್ತೆ ಕಣಕ್ಕಿಳಿಸಿ ಸಮಾಧಾನಪಡಿಸುವ ತಂತ್ರಗಾರಿಕೆಯೂ ಇದರಲ್ಲಿದೆ.

ಕರಾವಳಿಗೆ ರಾಜ್ಯಾಧ್ಯಕ್ಷ ಪಟ್ಟ?
ನಳಿನ್‌ ಕುಮಾರ್‌ ಕಟೀಲು ಅವರು ಕರಾವಳಿ ಭಾಗದವರಾಗಿದ್ದು, ಶೋಭಾ ಕರಂದ್ಲಾಜೆಗೆ ರಾಜ್ಯಾಧ್ಯಕ್ಷರ ಪಟ್ಟ ಒಲಿದರೆ ಕರಾವಳಿಯವರಿಗೇ ಮತ್ತೊಮ್ಮೆ ಈ ಪಟ್ಟ ಸಿಕ್ಕಂತಾಗುತ್ತದೆ. ಅಲ್ಲದೆ ಮೊಟ್ಟ ಮೊದಲ ಮಹಿಳಾ ರಾಜ್ಯಾಧ್ಯಕ್ಷ ಎನ್ನುವ ಕೀರ್ತಿಗೂ ಶೋಭಾ ಪಾತ್ರರಾಗಲಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಸೇರಿದ ಶೋಭಾ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ಕೊಟ್ಟರೆ, ವಿಪಕ್ಷ ನಾಯಕ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಅಥವಾ ಬಸನಗೌಡ ಪಾಟೀಲ್‌ ಯತ್ನಾಳ್‌ ಹೆಸರು ಮತ್ತೊಮ್ಮೆ ಮುಂಚೂಣಿಗೆ ಬರಲಿದೆ. ಒಕ್ಕಲಿಗ-ಲಿಂಗಾಯತ ಜಾತಿ ಸಂಯೋಜನೆಯನ್ನು ಬಿಟ್ಟು ಹಿಂದುಳಿದ ವರ್ಗದವರಿಗೆ ಸ್ಥಾನ ನೀಡಬಹುದೇ ಎಂಬ ರಾಜಕೀಯ ಲೆಕ್ಕಾಚಾರಗಳೂ ನಡೆದಿವೆ.

ಟಾಪ್ ನ್ಯೂಸ್

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

dam-1724038171

Karnataka: 50 ವರ್ಷ ಮೀರಿದ ಜಲಾಶಯ ದುರಸ್ತಿಗೆ 10 ಸಾವಿರ ಕೋ.ರೂ.

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.