Karkala: ನಾಪತ್ತೆಯಾಗಿದ್ದ ಹೆಡ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ
Team Udayavani, Oct 23, 2023, 1:28 PM IST
ಕಾರ್ಕಳ: ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಅವರ ಮೃತದೇಹ ಕಾರ್ಕಳ ಲಕ್ಷ್ಮೀದೇವಿ ಕಲ್ಯಾಣ ಮಂಟಪ ಸಮೀಪ ಆ.23ರ ಸೋಮವಾರ ಪತ್ತೆಯಾಗಿದೆ.
ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ ಅ.19ರಂದು ಕಾಣೆಯಾಗಿದ್ದರು. ಅಂದು ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಅನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು.
ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಶೃತಿನ್ ಪತ್ನಿ ನಾಪತ್ತೆ ದೂರು ದಾಖಲಿಸಿದ್ದರು. 2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಇವರು ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಕಾರ್ಯತತ್ಪರತೆಯಿಂದ ಜನಾನುರಾಗಿಯಾಗಿದ್ದರು. ಅ.18ರಂದು ವಾರದ ರಜೆ ಪಡೆದಿದ್ದ ಶೃತಿನ್ ಅ.19ರಂದು ಸಿಎಲ್ ಪಡೆದಿದ್ದರು. ಬಳಿಕ ಕಾಣೆಯಾಗಿದ್ದರು.
ನಾಪತ್ತೆ ಬಳಿಕ ಜಿಲ್ಲೆಯ ವಿವಿದೆಡೆಗಳಲ್ಲಿ ತಿರುಗಾಡುತ್ತಿದ್ದ ಅವರು ಮಣಿಪಾಲದ ಎಟಿಎಂ ಒಂದರಿಂದ ಹಣವನ್ನುನಗದೀಕರಿಸಿದ್ದರು. ಪಡುಬಿದ್ರಿ ಪೋಲೀಸರಿಂದ ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡಿದ್ದ ಶೃತಿನ್ ಈಗ ಆತ್ಮಹತ್ಯೆಗೈದುಕೊಂಡಿರುವ ಸುದ್ದಿ ಇಲಾಖೆಗೂ ಬರಸಿಡಿಲು ಬಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.