![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 23, 2023, 4:18 PM IST
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ, ದಿಗ್ಗಜ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ (77) ಸೋಮವಾರ(ಅ.23 ರಂದು) ನಿಧನರಾಗಿದ್ದಾರೆ.
ಸೆಪ್ಟೆಂಬರ್ 25 1946 ರಂದು ಭಾರತದ ಅಮೃತಸರದಲ್ಲಿ ಜನಿಸಿದ ಬಿಷನ್ ಸಿಂಗ್ ಬೇಡಿ ಎಡಗೈ ಸ್ಪಿನ್ನರ್ ಆಗಿ ಗುರುತಿಸಿಕೊಂಡಿದ್ದರು.
ವಿಶಿಷ್ಟ ಶೈಲಿಯಲ್ಲಿ ಸ್ನಿನ್ ಬೌಲಿಂಗ್ ಮಾಡುತ್ತಿದ್ದ ಬೇಡಿ ಅವರು, 1971 ರಲ್ಲಿ ಇಂಗ್ಲೆಂಡ್ ವಿರುದ್ದದ ಏಕದಿನ ಪಂದ್ಯಕ್ಕೆ ಭಾರತದ ಕ್ಯಾಪ್ಟನ್ ಆಗಿ ತಂಡವನ್ನು ಮುನ್ನಡೆಸಿದ್ದರು. ಆ ಮೂಲಕ ಇಂಗ್ಲೆಂಡ್ ವಿರುದ್ಧದ ಭಾರತದ ಐತಿಹಾಸಿಕ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಎರಪಳ್ಳಿ ಪ್ರಸನ್ನ, ಬಿಎಸ್ ಚಂದ್ರಶೇಖರ್ ಮತ್ತು ಎಸ್. ವೆಂಕಟರಾಘವನ್ ಅವರೊಂದಿಗೆ ಬೇಡಿ ಭಾರತದ ಬೌಲಿಂಗ್ ಇತಿಹಾಸದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿದ್ದಾರೆ.
1975 ರ ವಿಶ್ವಕಪ್ ಪಂದ್ಯದಲ್ಲಿ ಮಾಡಿದ ಬೌಲಿಂಗ್ ದಾಳಿಯಿಂದ ಪೂರ್ವ ಆಫ್ರಿಕಾ 120 ರನ್ ಗಳಿಗೆ ಸರ್ವಪತನವಾಗಿತ್ತು.
1967 – 1979 ರ ನಡುವೆ ಭಾರತ ತಂಡದಲ್ಲಿ ಪ್ರಮುಖ ಸ್ಪಿನ್ನ್ ಬೌಲರ್ ಆಗಿ ಗುರುತಿಸಿಕೊಂಡಿದ್ದ ಬೇಡಿ 67 ಟೆಸ್ಟ್ ಪಂದ್ಯಗಳಲ್ಲಿ 266 ವಿಕೆಟ್ ಗಳನ್ನು ಪಡೆದಿದ್ದರು. 10 ಏಕದಿನ ಪಂದ್ಯದಲ್ಲಿ 7 ವಿಕೆಟ್ ಗಳನ್ನು ಪಡೆದಿದ್ದರು.
ಆಟದಿಂದ ನಿವೃತ್ತರಾದ ಬಳಿಕವೂ ಕ್ರಿಕೆಟ್ ವಿಚಾರವಾಗಿ ತನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು.
ಬೇಡಿ ಅವರು ತಮ್ಮ ಪುತ್ರ ಮತ್ತು ಬಾಲಿವುಡ್ ನಟ ಅಂಗದ್ ಬೇಡಿ ಅವರನ್ನು ಅಗಲಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.