Bantwal: ಬಿಲ್ಡರ್ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದಲೇ ಕಳ್ಳತನ!
Team Udayavani, Oct 24, 2023, 4:36 PM IST
ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸುಮಾರು 2,75,0000 ರೂ ನಗದು ಹಾಗೂ 4,96,000ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಜೊತೆ ಸುಮಾರು ಎಂಟು ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಮಂಜೇಶ್ವರ ಮೂಲದ ಆಲಿ ಎಂಬಾತ ಸೇರಿದ್ದ. ಆತನಿಗೆ ಫರಂಗಿಪೇಟೆ ಎಂಬಲ್ಲಿನ ಹುಡುಗಿಯ ಜೊತೆ ವಿವಾಹವಾಗಿದ್ಸು, ಮಾಲಕರ ಜೊತೆ ವಿಶ್ವಾಸ ಹೊಂದಿದ್ದ. ಈ ಕಾರಣಕ್ಕಾಗಿ ಸಹಾಯಕನಾಗಿ ದುಡಿಯುತ್ತಿದ್ದ ಆಲಿಯಲ್ಲಿ ಮನೆಗೆ ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಡುತ್ತಿದ್ದರು. ಆದರೆ ಈತನ ಮೇಲಿರಿಸಿದ್ದ ಅತೀ ವಿಶ್ವಾಸ ಮಾಲಕರಿಗೆ ಮುಳುವಾಗಿ ಪರಿಣಮಿಸಿತು.
ಅ.18 ರಂದು ಮನೆ ಮಂದಿ ಎಲ್ಲರು ಮನೆಗೆ ಬೀಗ ಹಾಕಿ ಮಂಗಳಾದೇವಿ, ಜಪ್ಪು ನಲ್ಲಿರುವ ತಮ್ಮನ ಮನೆಗೆ ಹೋಗಿದ್ದರು. ಮನೆಗೆ ಬೀಗ ಹಾಕಿ ಅದರ ಕೀ ಯನ್ನು ಆಲಿಯಲ್ಲಿ ನೀಡಿದ್ದರು. ಅ ಬಳಿಕ 19 ರಂದು ಕಟ್ಟಡ ಕಾಮಗಾರಿಯ ವಿಚಾರಕ್ಕೆ ಮಾಲಕ ಮೊಹಮ್ಮದ್ ಅವರು ಈತನಿಗೆ ಪೋನ್ ಮಾಡಿದಾಗ ಪೋನ್ ಸ್ವಿಚ್ ಆಫ್ ಆಗಿತ್ತು.ಮಾಲಕರು ಮರುದಿನ (ಅ. 20) ಅಗತ್ಯ ಕೆಲಸವೊಂದರ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿಂದ ಪೋನ್ ಮಾಡಿದಾಗಲೂ ಈತನ ಮೊಬೈಲ್ ಆಫ್ ಆಗಿತ್ತು.
ಕೆಲಸದ ಒತ್ತಡದ ನಡುವೆಯ ಅ. 23 ರಂದು ಊರಿಗೆ ವಾಪಾಸಾದ ಇವರು ರಾತ್ರಿ ಸುಮಾರು 8 ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಹಾಕಿಕೊಂಡಿತ್ತು. ಕೀ ಕೊಡುವಂತೆ ಆತನಿಗೆ ಪೋನ್ ಮಾಡಿದಾಗ ಆಗಲೂ ಆಫ್ ಆಗಿತ್ತು. ಸಂಶಯದಿಂದ ಮನೆಯ ಹಿಂಬದಿಯಿಂದ ಕಿಟಕಿಯಲ್ಲಿ ಇಣುಕಿ ನೋಡಿದಾಗ ಕೋಣೆಯ ಬಾಗಿಲು ತೆರದುಕೊಂಡಿದ್ದು, ಕಪಾಟಿನ ಲಾಕರ್ ಮುರಿದು ಅದರಲ್ಲಿ ಇದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿತ್ತು.
ಕೂಡಲೇ ಗ್ರಾಮಾಂತರ ಪೋಲಿಸರಿಗೆ ದೂರು ನೀಡಿ, ಪೋಲೀಸ್ ಸಮಕ್ಷಮದಲ್ಲಿ ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಮೊಹಮ್ಮದ್ ಅವರು ಕಪಾಟಿನಲ್ಲಿರಿಸಲಾಗಿದ್ದ ರೂ. 25 ಲಕ್ಷ ಹಾಗೂ ಅವರ ತಂದೆಯ ಕಪಾಟಿನಲ್ಲಿರಿಸಲಾಗಿದ್ದ ರೂ 25 ಲಕ್ಷ ಹಾಗೂ ರೂ. 496,000 ಲಕ್ಷ ಮೌಲ್ಯದ 24 ಗ್ರಾಂ ತೂಕದ ಬ್ರಾಸ್ ಲೈಟ್, 16 ಗ್ರಾಂ ತೂಕದ ಎರಡು ಚಿನ್ನದ ಉಂಗುರ, 40 ಗ್ರಾಂ ತೂಕದ ಚಿನ್ನದ ಬಲೆಗಳು, 8 ಗ್ರಾಂ ತೂಕದ ಚಿನ್ನದ ಬೆಂಡೋಲೆ, 32 ಗ್ರಾಂ.ತೂಕದ ಚಿನ್ನದ ಮಾಲೆ, 4 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಹಾಗೂ ಬೆರಳಚ್ಚು ತಜ್ಞರು,ಶ್ವಾನದಳದವರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.