Crime News ಕಾಸರಗೋಡು ಅಪರಾಧ ಸುದ್ದಿಗಳು


Team Udayavani, Oct 24, 2023, 7:04 PM IST

Crime News ಕಾಸರಗೋಡು ಅಪರಾಧ ಸುದ್ದಿಗಳು

ನೇಣು ಬಿಗಿದು ಆತ್ಮಹತ್ಯೆ
ಪೆರ್ಲ: ಎಣ್ಮಕಜೆ ನಡುಬೈಲ್‌ ನಿವಾಸಿ, ಟೈಲ್ಸ್‌ ಕಾರ್ಮಿಕ ದಿ|ನಾರಾಯಣ ನಾಯ್ಕ ಅವರ ಪುತ್ರ ಚಂದ್ರಶೇಖರ(38) ಅವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ : ಮದ್ರಸಾ ಅಧ್ಯಾಪಕನ ಬಂಧನ
ಕಾಸರಗೋಡು: ಹದಿನಾಲ್ಕರ ಹರೆಯದ ಬಾಲಕಿಗೆ ಕಳೆದ ಎರಡು ವರ್ಷಗಳಿಂದ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಮದ್ರಸಾ ಅಧ್ಯಾಪಕ ಮುನ್ನಾಡ್‌ ಕೊಟ್ಟೋಡಿ ನಿವಾಸಿ ಸಿ.ಅಬ್ದುಲ್‌ ರಾಶಿದ್‌(31)ನನ್ನು ಚಂದೇರ ಪೊಲೀಸರು ಬಂಧಿಸಿದ್ದಾರೆ.

ಪಡನ್ನ ಪಂಚಾಯತ್‌ನ ಎಡಚಾಕೈಯ ಮದ್ರಸಾ ಅಧ್ಯಾಪಕನಾಗಿದ್ದ ಆರೋಪಿ ವಾಸಿಸುತ್ತಿದ್ದ ಕ್ವಾರ್ಟರ್ಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಬಾಲಕಿಯ ಮನೆಗೂ ಬಂದು ಬೆದರಿಕೆಯೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಫೋಕೊÕà ಕಾನೂನು ಪ್ರಕಾರ ಕೇಸು ದಾಖಲಿಸಿ ಬಂಧಿಸಿದ್ದಾರೆ.

ಮದ್ಯ ಸಹಿತ ಇಬ್ಬರ ಬಂಧನ
ಕಾಸರಗೋಡು: ಚೆಂಗಳದಿಂದ 7.2 ಲೀಟರ್‌ ಮದ್ಯ ವಶಪಡಿಸಿಕೊಂಡ ಕಾಸರಗೋಡು ಅಬಕಾರಿ ರೇಂಜ್‌ ಕಚೇರಿಯ ಅಧಿಕಾರಿಗಳು ಈ ಸಂಬಂಧ ಚೆರ್ಕಳದ ರಫೀಕ್‌ನನ್ನು ಬಂಧಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಚೆಂಗಳ ರಾಷ್ಟ್ರೀಯ ಹೆದ್ದಾರಿ ಪರಿಸರದಲ್ಲಿ ಅಕ್ರಮವಾಗಿ ಇರಿಸಿದ್ದ 9.18 ಲೀಟರ್‌ ಮದ್ಯವನ್ನು ವಶಪಡಿಸಿಕೊಂಡ ಅಬಕಾರಿ ದಳ ಈ ಸಂಬಂಧ ವಯನಾಡು ಪುಲ್‌ಪಳ್ಳಿ ಪೆರಿಂಙಲ್ಲೂರ್‌ನ ಪುನ್ನತ್‌ ಚಾಲಿಯಿಲ್‌ ವೀಟಿಲ್‌ನ ಮನೋಜ್‌ ಕೆ.ಕೆ(30) ಮತ್ತು ತಿರುವನಂತಪುರ ನೆಡುಮಂಙಾಡ್‌ ಚಟ್ಟೂರು ಆನೆಪ್ಪಾರದ ಅನಿಲ್‌ ಎಸ್‌(42)ನನ್ನು ಬಂಧಿಸಿದೆ.

ನೇಣು ಬಿಗಿದು ಆತ್ಮಹತ್ಯೆ
ಮಂಜೇಶ್ವರ; ಹಾವೇರಿ ಜಿಲ್ಲೆಯ ಹತ್ತಿಮತ್ತೂರು ನಿವಾಸಿ, ಮಂಜೇಶ್ವರ ಕಟ್ಟೆಬಜಾರ್‌ನ ಬಾಡಿಗೆ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿರುವ ಕೂಲಿ ಕಾರ್ಮಿಕ ಭೀಮಪ್ಪ(40) ಕ್ವಾರ್ಟರ್ಸ್‌ನೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಸಿದು ಬಿದ್ದು ಸಾವು
ಮಂಜೇಶ್ವರ: ಇಲ್ಲಿನ ಡಾನ್‌ಬಾಸ್ಕೋ ಶಾಲಾ ಬಳಿಯ ನಿವಾಸಿ ದಿ.ಬೌತೀಸ್‌ ಡಿ’ಸೋಜ ಅವರ ಪುತ್ರ ಹೆಂಡ್ರಿ ಡಿ’ಸೋಜ(46) ಅವರು ಚಿಗುರುಪಾದೆಯ ಶೇಂದಿ ಅಂಗಡಿಯಲ್ಲಿ ಕುಸಿದು ಬಿದ್ದು ಸಾವಿಗೀಡಾದರು. ಹಲವು ವರ್ಷಗಳಿಂದ ಅವರು ಶೇಂದಿ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕುಸಿದು ಬಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದಂತೆ ರಸ್ತೆಮಧ್ಯೆ ಸಾವಿಗೀಡಾದರು.

ರೈಲು ಢಿಕ್ಕಿ : ಅಪರಿಚಿತ ವ್ಯಕ್ತಿಯ ಸಾವು
ಕಾಸರಗೋಡು: ಪಳ್ಳಿಕೆರೆಯಲ್ಲಿ ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವಿಗೀಡಾದ ಘಟನೆ ನಡೆದಿದೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಎಗ್ಮೋರ್ ಎಕ್ಸ್‌ಪ್ರೆಸ್‌ ರೈಲುಗಾಡಿ ಢಿಕ್ಕಿ ಹೊಡೆದು ಸಾವು ಸಂಭವಿಸಿತು. ಬೇಕಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಳಿ ಶರ್ಟ್‌, ಬಿಳಿ ಧೋತಿ ಧರಿಸಿದ್ದಾರೆ. ಮೃತದೇಹವನ್ನು ಕಾಂಞಂಗಾಡ್‌ನ‌ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.