Businessman kidnapped: ಹಣಕಾಸಿನ ವಿಚಾರಕ್ಕೆ ಉದ್ಯಮಿ ಅಪಹರಿಸಿದ ನಾಲ್ವರು ಆರೋಪಿಗಳ ಬಂಧನ


Team Udayavani, Oct 25, 2023, 11:30 AM IST

tdy-6

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ಉದ್ಯಮಿ ಅಭಿಲಾಷ್‌ ಎಂಬುವರನ್ನು ಅಪಹರಿಸಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ರಾಮಮೂರ್ತಿನಗರ ಪೊಲೀಸರು ಬಂಧಿ ಸಿದ್ದಾರೆ. ಸಂದೀಪ್‌, ಗೋಪಾಲ್‌ ಹಾಗೂ ಭಾಸ್ಕರ್‌ ಎಂಬವರನ್ನು ಬಂಧಿಸಲಾಗಿದೆ.

ಅ.20ರಂದು ಉದ್ಯಮಿ ಅಭಿಲಾಷ್‌ ಎಂಬವರನ್ನು ಅಪಹರಿಸಲಾಗಿತ್ತು. ಸಂಪಿಗೆಹಳ್ಳಿ ನಿವಾಸಿ ಅಭಿಲಾಷ್‌ ಮಹಿಳೆಯೊಬ್ಬರ ಪಾಲುದಾರಿಕೆಯಲ್ಲಿ ಉದ್ಯಮ ನಡೆಸುತ್ತಿದ್ದರು. ಇಬ್ಬರ ನಡುವೆ 1.50 ಕೋಟಿ ರೂ. ವ್ಯವಹಾರವಿತ್ತು. ಈ ಮಧ್ಯೆ ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಇದೇ ವಿಚಾರಕ್ಕೆ ಮಹಿಳೆ ಕಡೆಯ ಕೆಲ ವ್ಯಕ್ತಿಗಳು ಸಂಪಿಗೆಹಳ್ಳಿ ಬಳಿ ಅಭಿಲಾಷ್‌ನನ್ನು ಅಪಹರಿಸಿ ರಾಮಮೂರ್ತಿನಗರದ ಗೋದಾಮು ವೊಂದರಲ್ಲಿ ಅಕ್ರಮ ಬಂಧನದಲ್ಲಿರಿಸಿದ್ದರು. ಚಾಕು ತೋರಿಸಿ ಬೆದರಿಸಿದ್ದರು. ಅಲ್ಲದೆ, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಪೊಲೀಸರು ಹೇಳಿದರು.

ಈ ಮಧ್ಯೆ ಆರೋಪಿಗಳು ಊಟಕ್ಕೆಂದು ಹೊರಗಡೆ ಹೋದಾಗ ಅಭಿಲಾಷ್‌ ಫೋನ್‌ನಿಂದ ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ರಾಮಮೂರ್ತಿ ನಗರ ಠಾಣೆ ಪೊಲೀಸರು ಉದ್ಯಮಿಯನ್ನು ರಕ್ಷಿಸಿದ್ದಾರೆ.

ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, ಮಹಿಳೆ ಸೇರಿ ಇತರೆ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

SMAT 2024: TV umpire apologizes live on air! What happened?

SMAT 2024: ನೇರ ಪ್ರಸಾರದಲ್ಲೇ ಕ್ಷಮೆ ಕೇಳಿದ ಟಿವಿ ಅಂಪೈರ್!‌ ಆಗಿದ್ದೇನು?

Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ‌ ಯಾನ

Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ‌ ಯಾನ

From 5 Rs Concert to 5 Grammys…: Tabla Ustad Zakir Hussain

Zakir Hussain: ‌5 ರೂ ಕಾನ್ಸರ್ಟ್‌ ನಿಂದ 5 ಗ್ರ್ಯಾಮಿಯವರೆಗೆ…: ತಬಲಾ ಉಸ್ತಾದ್‌ ನಾದಮಯ ಪಯಣ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

Food-safe

Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

‌Election: ಒಕ್ಕಲಿಗ ಸಂಘದ ಚುನಾವಣೆ; ಡಿ.ಕೆ.ಶಿವಕುಮಾರ್ ಬಣ ಮೇಲುಗೈ

11

Inner politics; ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲ: ವಿಜಯೇಂದ್ರ

Okkaliga-Swamiji

Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ

20-

Bengaluru: ದೇಶ-ವಿದೇಶಿಗರ ಗಮನ ಸೆಳೆಯುತ್ತಿರುವ ಸಿದ್ದಿ ಕಮ್ಯುನಿಟಿ ಟೂರಿಸಂ!

14-

Health: ಎಸ್ಸಿ, ಎಸ್ಟಿ: ವಿರಳ ಕಾಯಿಲೆಯಿಂದ ಇನ್ನಷ್ಟು ಸುರಕ್ಷೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

SMAT 2024: TV umpire apologizes live on air! What happened?

SMAT 2024: ನೇರ ಪ್ರಸಾರದಲ್ಲೇ ಕ್ಷಮೆ ಕೇಳಿದ ಟಿವಿ ಅಂಪೈರ್!‌ ಆಗಿದ್ದೇನು?

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ

Koteshwara: ಸಂಭ್ರಮದ ಕೊಡಿಹಬ್ಬ…

Koteshwara: ಸಂಭ್ರಮದ ಕೊಡಿಹಬ್ಬ…

Mangaluru: ಮೂಲಗೇಣಿ ಹಕ್ಕು ಸದನದಲ್ಲಿ ಚರ್ಚೆ: ಐವನ್‌ ಡಿ’ಸೋಜಾ

Mangaluru: ಮೂಲಗೇಣಿ ಹಕ್ಕು ಸದನದಲ್ಲಿ ಚರ್ಚೆ: ಐವನ್‌ ಡಿ’ಸೋಜಾ

Aranthodu: ಕಾಡು ಪ್ರಾಣಿ ಎಂದು ಸಾಕು ನಾಯಿಗೆ ಗುಂಡು ಹಾರಿಸಿದ ಬೇಟೆಗಾರರು

Aranthodu: ಕಾಡು ಪ್ರಾಣಿ ಎಂದು ಸಾಕು ನಾಯಿಗೆ ಗುಂಡು ಹಾರಿಸಿದ ಬೇಟೆಗಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.