Food Festival: ನಾಳೆಯಿಂದ ಮೂರು ದಿನ ತಿಂಡಿಪೋತರ ಹಬ್ಬ

Team Udayavani, Oct 26, 2023, 8:01 AM IST

2-bangalore

ಬೆಂಗಳೂರು: ಆಹಾರ ಪ್ರಿಯರಿಗಾಗಿ ದೇಶ, ವಿದೇಶಗಳ ಭಿನ್ನ-ವಿಭಿನ್ನ ಖಾದ್ಯಗಳ ಸವಿಯುವ ಉದ್ದೇಶದಿಂದ ಐ ನೆಟ್‌ ವರ್ತಿಂಗ್‌ ಸಂಸ್ಥೆಯಿಂದ ಅ.27ರಿಂದ 29ರವರೆಗೆ 3 ದಿನಗಳ ಕಾಲ “ತಿಂಡಿ ಪೋತರ ಹಬ್ಬ 2023′ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ ಡಿ. ನರೇಶ್‌ ಬಾಬು ತಿಳಿಸಿದರು.

ಅತಿ ದೊಡ್ಡ ಫ್ರೀಡಂ ಸನ್‌ ಫ್ಲವರ್‌ ಆಯಿಲ್‌ ಪ್ರಸ್ತುತಪಡಿಸುತ್ತಿರುವ ಸಸ್ಯಹಾರಿ ಆಹಾರ ಮೇಳವನ್ನು ನಾಯಂಡಹಳ್ಳಿಯ ಪಂತರಪಾಳ್ಯದ ನಂದಿ ಲಿಂಕ್‌ ಮೈದಾನದಲ್ಲಿ ಆಯೋಜಿಸಲಾಗಿದ್ದು, 600ಕ್ಕೂ ಹೆಚ್ಚು ಬಗೆಯ ವಿವಿಧ ಆಹಾರ ಖಾದ್ಯಗಳ ಪ್ರದರ್ಶನ ಮತ್ತು ಮಾರಾಟ ಮೇಳ ಜರುಗಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ವೇಳೆ ಮಾತನಾಡಿದ ಒಗ್ಗರಣೆ ಡಬ್ಬಿ ಖ್ಯಾತಿಯ ಮುರಳಿ, ತಿಂಡಿ ಪೋತರ ಹಬ್ಬದಲ್ಲಿ 80ಕ್ಕೂ ಹೆಚ್ಚು ಮಳಿಗೆ ತೆರೆಯಲಾಗುತ್ತಿದ್ದು, ಸಾವಿರಕ್ಕೂ ಅಧಿಕ ಬಾಣಸಿಗರ ಸಸ್ಯಹಾರಿ ಖಾದ್ಯಗಳ ತಯಾರಿಯು ಆಹಾರ ಪ್ರಿಯರನ್ನು ಪುಳಕಿತಗೊಳಿಸಲಿದೆ. ಸ್ಥಳದಲ್ಲಿಯೇ ಅಡುಗೆ ತಯಾರಿಸಿ ಉಣ ಬಡಿಸುವ, ಕೆಲ ಮಳಿಗೆಗಳಲ್ಲಿ ಸಿದ್ಧಪಡಿಸಿ ಪ್ಯಾಕ್‌ ಮಾಡಿದ ಆಹಾರವನ್ನು ಸಹ ಗ್ರಾಹಕರಿಗೆ ವಿತರಿಸಲಾಗುವುದು. ಮೂರು ದಿನಗಳ ಈ ಹಬ್ಬದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ತಿಂಡಿ ಪೋತರ ಹಬ್ಬದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಇದೊಂದು ಪರಿಸರ ಸ್ನೇಹಿ ಮತ್ತು ಶುಚಿತ್ವಕ್ಕೆ ಒತ್ತು ನೀಡುವ ಹಬ್ಬವಾಗಿದ್ದು, ಹಾಡು, ಕುಣಿತ, ಮನರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸಾಂಪ್ರಾಯಿಕ ಆಹಾರ, ಉತ್ತರ, ದಕ್ಷಿಣ ಭಾರತ, ಸಾಂಪ್ರದಾಯಿಕ, ದೇಶಿ ಅಡುಗೆಗಳ ರುಚಿ ನೋಡಬಹುದಾಗಿದೆ. ಆರೋಗ್ಯಕ್ಕೆ ಪೂರಕವಾದ ಪೌಷ್ಟಿಕ ಆಹಾರವಷ್ಟೇ ಅಲ್ಲದೇ ವಿದೇಶಗಳ ತಿಂಡಿ-ತಿನಿಸುಗಳಿಗೂ ಪ್ರತ್ಯೇಕ ಮಳಿಗೆ ತೆರೆಯಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ ಡಿ.ಡಿ ಪ್ರಶಾಂತ್‌ ತಿಳಿಸಿದರು.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.