Chikkaballapur Case: ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ
Team Udayavani, Oct 26, 2023, 11:50 AM IST
ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಮುಖ್ಯಮಂತ್ರಿಗಳು ಘಟನೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಘಟನೆ ವಿವರ: ಟಾಟಾ ಸುಮೊ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 13 ಮಂದಿ ಮೃತಪಟ್ಟ ಘಟನೆ ನಗರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆ.26ರ ಗುರುವಾರ ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ.
9 ಮಹಿಳೆಯರು ಹಾಗೂ ಗಂಡು ಮಗು ಸೇರಿ ನಾಲ್ಕು ಜನ ಪುರುಷರು ಮೃತಪಟ್ಟಿದ್ದಾರೆ. ಮೃತರನ್ನು ಆಂಧ್ರದ ಅನಂತಪುರ ಜಿಲ್ಲೆಯ ಗೋರಂಟ್ಲ ವ್ಯಾಪ್ತಿಗೆ ಸೇರಿದ ಕೊತ್ತಚೆರುವು ಕಡೆಯವರು ಎಂಬ ಮಾಹಿತಿ ಲಭಿಸಿದೆ. ಇವರೆಲ್ಲರೂ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.
ಪಂಚರ್ ಆಗಿ ನಿಂತಿದ್ದ ಕಂಟೈನರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ. ನಾಗೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.