Chennai: ಪೊಲೀಸರ ದಿವ್ಯನಿರ್ಲಕ್ಷ್ಯ: ರಾಜಭವನ ದೂರು
Team Udayavani, Oct 26, 2023, 9:24 PM IST
ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರ ಭದ್ರತೆ ವಿಚಾರದಲ್ಲಿ ರಾಜ್ಯ ಪೊಲೀಸ್ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದು, ಇದರ ಫಲವಾಗಿಯೇ ಬುಧವಾರ ರಾಜ್ಯಪಾಲರ ಭವನದ ಎದುರು ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ರಾಜಭವನ ಆರೋಪಿಸಿದೆ. ಘಟನೆ ಸಂಬಂಧ ಪೊಲೀಸ್ ಆಯುಕ್ತರಿಗೆ ರಾಜ್ಯಪಾಲ ಕಚೇರಿ ದೂರು ನೀಡಿದ್ದು, ಡಿಎಂಕೆ ಮತ್ತು ಮಿತ್ರಪಕ್ಷಗಳ ನಾಯಕರು ಸಾರ್ವಜನಿಕವಾಗಿಯೇ ಸಭೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯಪಾಲರಿಗೆ ಬೆದರಿಕೆ ಒಡ್ಡಿದ್ದಾರೆ.
ಇಂಥ ಘಟನೆಗಳು ರಾಜ್ಯಪಾಲರನ್ನು ಬೆದರಿಸುವುದಲ್ಲದೇ ಅವರ ಸಾಂವಿಧಾನಿಕ ಕರ್ತವ್ಯಗಳಿಗೆ ಅಡ್ಡಿಪಡಿಸುವ ಉದ್ದೇಶ ಹೊಂದಿವೆ. ಈ ಬಗ್ಗೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದರಿಂದ ದೂರು ನೀಡಿದರೂ ನಿಷ್ಪ್ರಯೋಜಕವಾಗಿದೆ. ಇಂಥ ವಾತಾವರಣದಲ್ಲಿ ರಾಜ್ಯಪಾಲರು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಈ ಹಿನ್ನೆಲೆ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರ ಕಾರ್ಯಾಲಯ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.