Dharwad; ಅರವಿಂದ ಜತ್ತಿ ಸೇರಿದಂತೆ ಮೂವರಿಗೆ ಕವಿವಿ ಗೌರವ ಡಾಕ್ಟರೇಟ್
Team Udayavani, Oct 27, 2023, 4:37 PM IST
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವವು ಅಕ್ಟೋಬರ್ 30 ರಂದು ಜರುಗಲಿದ್ದು, ಈ ಸಲದ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ ಹೇಳಿದರು.
ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಅವರು, ಬಸವೇಶ್ವರ ತತ್ವಗಳ ಪ್ರಚಾರ, ವಚನ ಸಾಹಿತ್ಯದಲ್ಲಿ ಅನುವಾದ ಸೇರಿದಂತೆ ಶರಣ ತತ್ವ ಪ್ರಚಾರಕ್ಕಾಗಿ ನೀಡಿರುವ ಕೊಡುಗೆಗಾಗಿ ಬಸವ ಸಮಿತಿಯ ರಾಜ್ಯ ಅಧ್ಯಕ್ಷರಾದ ಅರವಿಂದ ಜತ್ತಿ, ಆರೋಗ್ಯ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಾಗಿ ಧಾರವಾಡ ಮೂಲದ ಅಮೇರಿಕದಲ್ಲಿ ನೆಲೆಸಿರುವ ಶಿಕ್ಷಣ ಪ್ರೇಮಿ ರವಿಶಂಕರ ಭೂಪಲಾಪೂರ ಹಾಗೂ ಸಮಾಜ ಸೇವೆ, ಗ್ರಾಮಗಳ ಅಭಿವೃದ್ದಿಗಾಗಿ ಗ್ರಾಮಗಳ ದತ್ತು ಸ್ವೀಕರಿಸಿದ ಉದ್ಯಮಿ ಅರ್ಚನಾ ಸುರಾಣಾ ಅವರಿಗೆ ಗೌಡಾ ನೀಡಲು ನಿರ್ಧರಿಸಲಾಗಿದೆ ಎಂದರು.
ಅ.30 ರಂದು 10:30 ಗಂಟೆಗೆ ನಡೆಯಲಿರುವ ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವದಲ್ಲಿ ಈ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವದು. ಈ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಕುಲಾಧಿಪತಿಯಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಾಲ್ಗೊಳ್ಳಲಿದ್ದಾರೆ. ನವದೆಹಲಿಯ ಇಂಡೋ ಫ್ರೆಂಚ್ ಸೆಂಟರ್ ಫಾರ್ ಪ್ರಮೋಷನ್ ಆಫ್ ಅಡ್ವಾನ್ಸ್ ರಿಸರ್ಚ ನಿರ್ದೇಶಕ ಪ್ರೊ.ನಿತಿನ್ ಶೇಠ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.