DCC ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಶಿವಾನಂದ ಪಾಟೀಲ್ ಪುನರಾಯ್ಕೆ
1997 ರಿಂದ ಸತತ ಚುನಾಯಿತ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆ
Team Udayavani, Oct 27, 2023, 8:07 PM IST
ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಜವಳಿ ಸಚಿವ ಶಿವಾನಂದ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಜಶೇಖರ ಗುಡದಿನ್ನಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಶುಕ್ರವಾರ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ನೂತನ ಕಛೇರಿಯಲ್ಲಿ 2023 ರಿಂದ 2028 ರ ವರೆಗೆ 5 ವರ್ಷಗಳ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷರಾಗಿಯೂ ಹಾಗೂ ಉಪಾಧ್ಯಕ್ಷರಾಗಿ ರಾಜಶೇಖರ ಗುಡದಿನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗೆ 1997 ರಿಂದ 2023 ರವರೆಗೆ ಸತತವಾಗಿ ಚುನಾಯಿತ ಅಧ್ಯಕ್ಷರಾಗಿ ಬ್ಯಾಂಕ್‍ನ್ನು ಮುನ್ನಡೆಸಿ ಐತಿಹಾಸಿಕ ದಾಖಲೆ ಬರೆದಿರುವ ಸಚಿವ ಶಿವಾನಂದ ಪಾಟೀಲ, ತಮ್ಮ ಅವಧಿಯಲ್ಲಿ ಡಿಸಿಸಿ ಬ್ಯಾಂಕ್‍ಗೆ ಸತತ ಲಾಭಗಳಿಸಿ, ಗಮನಾರ್ಹ ಪ್ರಗತಿ ಸಾದಿಧನೆ ಮಾಡಿ, ಕರ್ನಾಟಕ ರಾಜ್ಯದ ಅತ್ಯುತ್ತಮ ಡಿಸಿಸಿ ಬ್ಯಾಂಕುಗಳಲ್ಲಿ ಒಂದಾಗಿ ಮಾಡಿರುವ ಹಿರಿಮೆ ಸಲ್ಲುತ್ತದೆ.
ಉಪಾಧ್ಯಕ್ಷರಾಗಿರುವ ರಾಜಶೇಖರ ಗುಡದಿನ್ನಿ 1996 97 ರಿಂದ ಸತತವಾಗಿ ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, 3ನೇ ಬಾರಿ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವುದು ವಿಸೇಷ.
ದಿ. 12-10-2023 ರಂದು ಜರುಗಿದ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕ 11 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ, ರಾಜಶೇಖರ ಪಾಟೀಲ ಮಾತ್ರವಲ್ಲದೇ ನಿರ್ದೇಶಕರಾಗಿ10 ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ.
ಶೇಖರ ದಳವಾಯಿ, ಬಿ.ಎಸ್. ಪಾಟೀಲ (ಯಾಳಗಿ), ಕಲ್ಲನಗೌಡ ಪಾಟೀಲ, ಹಣಮಂತ್ರಾಯಗೌಡ ಪಾಟೀಲ, ಸಂಯುಕ್ತಾ ಪಾಟೀಲ, ಗುರುಶಾಂತ ನಿಡೋಣಿ, ಸುರೇಶಗೌಡ ಬಿರಾದಾರ, ಚಂದ್ರಶೇಖರಗೌಡ ಪಾಟೀಲ (ಮನಗೂಳಿ), ಅರವಿಂದ ಪೂಜಾರಿ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕಿ ಭಾಗ್ಯಶ್ರೀ ಎಸ್. ಕೆ. ಇವರು ಪದಾಧಿಕಾರಿಗಳ ಚುನಾವಣೆಯಲ್ಲಿ ಭಾಗಿಯಾಗಿದ್ದರು. ಚುನಾವಣಾಧಿಕಾರಿಯಾಗಿ ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಆಯ್ಕೆಯನ್ನು ಘೋಷಿಸಿದರು.
ಬ್ಯಾಂಕ್‍ನ ವೃತ್ತಿಪರ ನಿರ್ದೇಶಕರಾದ ಎಸ್.ಎಸ್.ಶಿಂಧೆ, ಆಡಳಿತ ಮಂಡಳಿ ಸಲಹೆಗಾರರಾದ ಜೆ. ಕೊಟ್ರೇಶಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಡಿ. ಬಿರಾದಾರ ಸೇರಿದಂತೆ ಇತರರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.