E-mail: 20 ಕೋಟಿ ಕೊಡಿ ಇಲ್ಲವಾದರೆ… ಮುಖೇಶ್ ಅಂಬಾನಿಗೆ ಇ ಮೇಲ್ ಮೂಲಕ ಕೊಲೆ ಬೆದರಿಕೆ
Team Udayavani, Oct 28, 2023, 11:10 AM IST
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಳುಹಿಸಿರುವ ಇ-ಮೇಲ್‌ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಹತ್ಯೆ ಮಾಡಲಾಗುವುದು ಎಂದು ಹೇಳಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ ಎಂಬ ಮೇಲ್ ಬಂದಿದೆ.
ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಕೊಲೆ ಬೆದರಿಕೆ ಇದೆ ಮೊದಲಲ್ಲ:
ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಇದನ್ನೂ ಓದಿ: SSE: ʼಸಪ್ತ ಸಾಗರದಾಚೆ ಎಲ್ಲೋʼ – ಸೈಡ್ -ಬಿ ಟೀಸರ್ ರಿಲೀಸ್; ಕಾಡಿದ ಮನು – ಪ್ರಿಯಾಳ ಮೌನಯಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.